ಪ್ರತಿನಿಧಿ ವರದಿ ಚಾಮರಾಜನಗರ
ಲೋಕಸಭಾ ಚುನಾವಣೆ ಸಂಬಂಧ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏ.26ರಂದು ಮತದಾನ ನಡೆಯಲಿದೆ.
ಮತಕೇಂದ್ರದ ವ್ಯಾಪ್ತಿಯ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಮತದಾನ ಮಾಡಲು ಅನುಕೂಲ ಕಲ್ಪಿಸುವ ದೃಷ್ಠಿಯಿಂದ ಏ. 26ರಂದು ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
