PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ತುಪ್ಪದ ಬೆಲೆ ಏರಿಕೆ: ರೈತರ ಪ್ರೋತ್ಸಾಹ ಧನ ಹೆಚ್ಚಿಸಿ, ಬಡವರಿಗೆ ನೆರವಾಗಿ – ರಾಜ್ಯ ಸರ್ಕಾರಕ್ಕೆ ಸಾರಾ ಮಹೇಶ್ ಆಗ್ರಹ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ತುಪ್ಪದ ಬೆಲೆ ಏರಿಕೆ: ರೈತರ ಪ್ರೋತ್ಸಾಹ ಧನ ಹೆಚ್ಚಿಸಿ, ಬಡವರಿಗೆ ನೆರವಾಗಿ – ರಾಜ್ಯ ಸರ್ಕಾರಕ್ಕೆ ಸಾರಾ ಮಹೇಶ್ ಆಗ್ರಹ
ಮುಖಪುಟಮೈಸೂರು ನಗರರಾಜಕೀಯ

ತುಪ್ಪದ ಬೆಲೆ ಏರಿಕೆ: ರೈತರ ಪ್ರೋತ್ಸಾಹ ಧನ ಹೆಚ್ಚಿಸಿ, ಬಡವರಿಗೆ ನೆರವಾಗಿ – ರಾಜ್ಯ ಸರ್ಕಾರಕ್ಕೆ ಸಾರಾ ಮಹೇಶ್ ಆಗ್ರಹ

Prathinidhi News
Last updated: November 6, 2025 1:26 pm
Prathinidhi News
Published November 6, 2025
Share
SHARE

ಮೈಸೂರು, ನವೆಂಬರ್‌ 6, 2025 : ರಾಜ್ಯದಲ್ಲಿ ಜಿಎಸ್‌ಟಿ ಇಳಿಕೆಯ ಬಳಿಕವೂ ತುಪ್ಪದ ಬೆಲೆ ಜಾಸ್ತಿಯಾಗಿದ್ದು, ಇದರಿಂದ ಬಡವರು ಮತ್ತು ಮಧ್ಯಮ ವರ್ಗದವರು ಬದುಕುವುದು ಕಷ್ಟಕರವಾಗಿದೆ. ಆದ್ದರಿಂದ ಸರ್ಕಾರವು ಕೂಡಲೇ ರೈತರ ಹಾಲಿನ ಪ್ರೋತ್ಸಾಹ ಧನವನ್ನು ಹೆಚ್ಚಿಸಬೇಕು ಎಂದು ಮಾಜಿ ಸಚಿವ ಸಾರಾ ಮಹೇಶ್ ಅವರು ಮೈಸೂರಿನಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಟೀಕೆ ವ್ಯಕ್ತಪಡಿಸಿದ ಸಾರಾ ಮಹೇಶ್, “ನಮ್ಮ ಆಡಳಿತದಲ್ಲಿ ಉತ್ತಮ ಆಡಳಿತ ಕೊಟ್ವಿ. ಈಗ ನಿಮ್ಮ ಅವಧಿಯಲ್ಲಿ ಉತ್ತಮ ಆಡಳಿತ ಕೊಡಿ,” ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಸಿಎಂ ಆಗಿ ದಾಖಲೆ ಮಾಡಿದ್ದಾರೆ. ಆದರೆ, ಅದೇ ರೀತಿ ಅತಿ ಹೆಚ್ಚು ರಾಜ್ಯದ ಸಾಲ ಮಾಡಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ ಎಂದು ದೂರಿದರು. ಸಿದ್ದರಾಮಯ್ಯನವರನ್ನು ದೇವರಾಜ ಅರಸು, ಮೈಸೂರು ಮಹಾರಾಜರಿಗಿಂತ ಅಭಿವೃದ್ಧಿ ಮಾಡಿದವರು ಎಂದು ಅವರ ಹಿಂಬಾಲಕರು ಮಾತನಾಡುವುದನ್ನು ಪ್ರಸ್ತಾಪಿಸಿದ ಅವರು, ಮುಖ್ಯಮಂತ್ರಿಗಳ ವರ್ಚಸ್ಸು ಮತ್ತು ಆಡಳಿತ ಇತ್ತೀಚಿನ ದಿನಗಳಲ್ಲಿ ರಾಜಿ ಆಗಿದೆಯೇ ಎಂದು ಪ್ರಶ್ನಿಸಿದರು.

ಕಾಮಗಾರಿಗಳ ಹಂಚಿಕೆ ಬಗ್ಗೆ ಗಂಭೀರ ಆರೋಪ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡಿದ್ದನ್ನು ಸ್ಮರಿಸಿದರು. ಆ ವೇಳೆ ಮಂಜೂರಾದ ಎಲ್ಲಾ ಹಳ್ಳಿಗಳಿಗೂ ತಾವೇ ಹೋಗಿ ಭೂಮಿ ಪೂಜೆ ಮಾಡಿದ್ದಾಗಿ ತಿಳಿಸಿದರು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ, ಗುದ್ದಲಿಪೂಜೆ ಮತ್ತು ಟೆಂಡರ್ ಆದ ಕಾಮಗಾರಿಯನ್ನು ಕ್ಯಾನ್ಸಲ್ ಮಾಡಿ, ಮತ್ತೆ ಅದೇ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲು ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ನಲ್ಲಿ ಬಂದಿರುವುದು ಏಕೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ಎಲ್ಲಾ ಕಾಮಗಾರಿಗಳನ್ನು ಲ್ಯಾಂಡ್ ಆರ್ಮಿಗೆ ನೀಡಿರುವುದನ್ನು ಸಾರಾ ಮಹೇಶ್ ಗಂಭೀರವಾಗಿ ಪ್ರಶ್ನಿಸಿದರು. “ಭ್ರಷ್ಟಾಚಾರ ಮುಕ್ತ ಸರ್ಕಾರ ಅಂತ ಹೇಳುವ ನೀವು, ಈ ಕಾಮಗಾರಿಯನ್ನು ಯಾಕೆ ಲ್ಯಾಂಡ್ ಆರ್ಮಿಗೆ ಕೊಟ್ಟಿದ್ದು ಹೇಳಿ?” ಎಂದು ನೇರ ಪ್ರಶ್ನೆ ಹಾಕಿದರು. ಸರ್ಕಾರವು ಜನರ ಕಣ್ಣೊರೆಸುವ ತಂತ್ರ ಮಾಡಬಾರದು, ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಕೊಡ್ತಿರುವುದರಿಂದ ಮಹಿಳೆಯರು ಸುಮ್ಮನಿದ್ದಾರೆ ಅಷ್ಟೇ ಎಂದು ಟೀಕಿಸಿದರು.

- ಜಾಹೀರಾತು -

ಅಂತಿಮವಾಗಿ, ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಬೇಕೆಂದರೆ ಕೂಡಲೇ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳನ್ನು ನಡೆಸಬೇಕು ಎಂದು ಸಾರಾ ಮಹೇಶ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

 

 

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ದೇಶ-ವಿದೇಶಮುಖಪುಟ

“ದಿತ್ವಾ” ಸೈಕ್ಲೋನ್ ಗೆ ದ್ವೀಪರಾಷ್ಟ್ರ ಶ್ರೀಲಂಕಾ ತತ್ತರ ; ಮರ*ಣ ಮಾರುತಕ್ಕೆ ಸಿಲುಕಿ ಕಂಗಾಲಾದ ಜನರು !

December 1, 2025
ಮುಖಪುಟಮೈಸೂರು ನಗರ

ಮೈಸೂರು: ಮೈಸೂರು : ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾ*ವು..!

December 10, 2025
ಮುಖಪುಟಮೈಸೂರು ನಗರ

ಮೈಸೂರು: ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ದ್ವಿತೀಯ ವಾರ್ಷಿಕೋತ್ಸವ; ಅಪೂರ್ವ ಸ್ನೇಹ ಬಳಗದಿಂದ ಭವ್ಯ ಸಂಭ್ರಮಾಚರಣೆ

January 22, 2026
ಬೆಂಗಳೂರುಮುಖಪುಟರಾಜಕೀಯ

ಆರ್ಥಿಕ ಸುಧಾರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ವರದಿ ಸಲ್ಲಿಕೆ

November 7, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?