ಮಡಿಕೇರಿ : ಕೊಡಗು ಜಿಲ್ಲಾ ಕಾಂಗ್ರೆಸ್ನ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಏ.23 ರಂದು ಮಡಿಕೇರಿ ಡಾ.ಅಂಬೇಡ್ಕರ್ ಭವನದಲ್ಲಿ ‘ಪರಿಶಿಷ್ಟ ಜಾತಿ ಸಮಾವೇಶ’ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಸದಸ್ಯ ಎಚ್.ಎಂ.ನಂದಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ, ಕೊಡಗು-ಮೈಸೂರು ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಮಾತನಾಡಿ, ಮೋದಿಯವರ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ ದೇಶ ಅಭಿವೃದ್ಧಿ ಶೂನ್ಯವಾಗಿದೆ. ರಾಜ್ಯ ಸರ್ಕಾರ ತಾನು ನೀಡಿದ್ದ ಐದು ಗ್ಯಾರಂಟಿಗಳನ್ನು ಪೂರೈಸಿದ್ದು, ಈ ಬಾರಿ ಜನತೆ ಕಾಂಗ್ರೆಸ್ಗೆ ಬೆಂಬಲ ನೀಡುವ ವಿಶ್ವಾಸವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಮೋಹನ್ ಮೌರ್ಯ, ನಗರಸಭಾ ನಾಮನಿರ್ದೇಶಿತ ಸದಸ್ಯರಾದ ಮುದ್ದುರಾಜ್ ಹಾಗೂ ಕಾಂಗ್ರೆಸ್ ಪರಿಶಿಷ್ಟ ನಗರ ಘಟಕದ ಪ್ರಮುಖರಾದ ಗಣೇಶ್ ಉಪಸ್ಥಿತರಿದ್ದರು.
ಫೋಟೋ 20 ಎಂಡಿಕೆ 10 :: ಕಾಂಗ್ರೆಸ್ಸುದ್ದಿಗೋಷ್ಠಿ