PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹುಟ್ಟುಹಬ್ಬ ಅಂಗವಾಗಿ ಕಾರ್ಯಕರ್ತರಿಂದ ಸ್ವಯಂ ಪ್ರೇರಿತ ರಕ್ತದಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹುಟ್ಟುಹಬ್ಬ ಅಂಗವಾಗಿ ಕಾರ್ಯಕರ್ತರಿಂದ ಸ್ವಯಂ ಪ್ರೇರಿತ ರಕ್ತದಾನ
ಮುಖಪುಟಮೈಸೂರು ನಗರರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹುಟ್ಟುಹಬ್ಬ ಅಂಗವಾಗಿ ಕಾರ್ಯಕರ್ತರಿಂದ ಸ್ವಯಂ ಪ್ರೇರಿತ ರಕ್ತದಾನ

Prathinidhi News
Last updated: November 5, 2025 3:22 pm
Prathinidhi News
Published November 5, 2025
Share
SHARE

ಮೈಸೂರು, ನವೆಂಬರ್‌ 5, 2025 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಮಾಜಿ ಅಧ್ಯಕ್ಷರಾದ ಎಲ್ ಆರ್ ಮಹದೇವಸ್ವಾಮಿ ಹೇಳಿದರು. 

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅಭಿಮಾನಿ ಬಳಗದ ವತಿಯಿಂದ ಬಿವೈ ವಿಜಯೇಂದ್ರರವರ ಹುಟ್ಟುಹಬ್ಬದ ಅಂಗವಾಗಿ
50ಕ್ಕೂ ಹೆಚ್ಚು ಕಾರ್ಯಕರ್ತರು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಗ್ರಾಮಾಂತರ ಮಾಜಿ ಅಧ್ಯಕ್ಷರಾದ ಎಲ್ ಆರ್ ಮಹದೇವಸ್ವಾಮಿ ಸ್ವತಹ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ ಮಾತಿನಿಂದ ಜನರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಛಾಪು ರೂಪಿಸಿಕೊಂಡಿದ್ದಾರೆ. ಇವರ ಅನುಭವ, ಸಂಘಟನೆ, ರಾಜಕಾರಣ ಮಾಡುವ ಕಾರ್ಯತಂತ್ರದಿಂದ ಉತ್ತಮ ಪದವಿಯ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ. ವಿಜಯೇಂದ್ರ ಅವರ ಸಂಘಟನೆಯಿಂದಾಗಿ ಮುಂಬರುವಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ. ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತಿರುವ ವಿಜಯೇಂದ್ರ ಅವರಿಗೆ ಚಾಮುಂಡೇಶ್ವರಿ ತಾಯಿ ಆರೋಗ್ಯ ಹಾಗೂ ಜನರ ಸೇವೆ ಕೈಗೊಳ್ಳಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಶುಭ ಕೋರಿದರು.

- ಜಾಹೀರಾತು -

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತಿತ್ತು. ಈಗ ಪುನರಾವರ್ತಿಯಂತೆ ವಿಜಯೇಂದ್ರ ಗುಡುಗಿದರೆ ವಿಧಾನಸೌಧ ನಡುಗುತ್ತದೆ. ಆಡಳಿತ ಪಕ್ಷ ಕಾಂಗ್ರೆಸ್ ಮಾಡುವ ಪ್ರತಿಯೊಂದು ತಪ್ಪನ್ನು ನಮ್ಮ ರಾಜ್ಯಾಧ್ಯಕ್ಷರು ಎತ್ತಿ ಹಿಡಿದು ನಾಡಿನ ಜನತೆಗೆ ತೋರಿಸುವ ಮೂಲಕ ಪ್ರಶ್ನಿಸುತ್ತಿದ್ದಾರೆ. ಜನತೆಗೆ ಯಾವುದೇ ರೀತಿ ಮೋಸ ಆಗದಂತೆ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲದೆ ಅಧಿಕಾರಕ್ಕೆ ಕಿತ್ತಾಡುತ್ತಿದ್ದು, ಸರ್ಕಾರ ಯಾವ ಸಮಯದಲ್ಲಾದರೂ ಬೀಳಬಹುದು. ಆಗ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದರು.

ಇದೇ ಸಂದರ್ಭದಲ್ಲಿ ಮಾಜಿನಗರ ಪಾಲಿಕಾ ಸದಸ್ಯರಾದ ಜಗದೀಶ್, ಮೂಡ ಮಾಜಿ ಸದಸ್ಯರಾದ ಲಕ್ಷ್ಮೀದೇವಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್, ಬಿಜೆಪಿ ಮುಖಂಡರಾದ ವಕೀಲ ಶಿವರಾಜ್, ಕುಮಾರಸ್ವಾಮಿ, ಹರೀಶ್ ಹಾಗೂ ಮತ್ತಿತರರು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ದೇಶ-ವಿದೇಶಮುಖಪುಟ

ಟೆಕ್ಸಾಸ್ ಸಮುದ್ರದಲ್ಲಿ ಮೆಕ್ಸಿಕನ್ ನೌಕಾಪಡೆ ವಿಮಾನ ಪತನ: ಐವರ ದುರ್ಮರಣ

December 23, 2025
ಮುಖಪುಟಮೈಸೂರು ನಗರ

ಮೈಸೂರು ತಹಶೀಲ್ದಾರ್ ವಿರುದ್ಧ ಗಂಭೀರ ಆರೋಪ: 80 ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಯತ್ನ

December 2, 2025
ಕ್ರೀಡೆಮುಖಪುಟರಾಜಕೀಯ

IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ : ಪ್ರಧಾನಿ ಮೋದಿ ಸಂತಾಪ

January 30, 2026
ಮುಖಪುಟಮೈಸೂರು ನಗರ

ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!

December 3, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?