PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿದ್ದರಾಮಯ್ಯ ಐದು ವರ್ಷವೂ ಸಿಎಂ ಆಗಿರುತ್ತಾರೆ: ಶಾಸಕ ಕೆ.ಎನ್. ರಾಜಣ್ಣ ಪುತ್ರ ರಾಜೇಂದ್ರ ವಿಶ್ವಾಸ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಿದ್ದರಾಮಯ್ಯ ಐದು ವರ್ಷವೂ ಸಿಎಂ ಆಗಿರುತ್ತಾರೆ: ಶಾಸಕ ಕೆ.ಎನ್. ರಾಜಣ್ಣ ಪುತ್ರ ರಾಜೇಂದ್ರ ವಿಶ್ವಾಸ
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಐದು ವರ್ಷವೂ ಸಿಎಂ ಆಗಿರುತ್ತಾರೆ: ಶಾಸಕ ಕೆ.ಎನ್. ರಾಜಣ್ಣ ಪುತ್ರ ರಾಜೇಂದ್ರ ವಿಶ್ವಾಸ

Prathinidhi News
Last updated: January 21, 2026 12:17 pm
Prathinidhi News
Published January 21, 2026
Share
SHARE

ಮೈಸೂರು, ಜನವರಿ 21, 2026 : ರಾಜ್ಯ ರಾಜಕಾರಣದ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಶಾಸಕ ಕೆ.ಎನ್. ರಾಜಣ್ಣ ಅವರ ಪುತ್ರ ರಾಜೇಂದ್ರ ಮೈಸೂರಿನಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರಬೇಕು ಎಂಬುದು ನಮ್ಮ ಆಸೆಯಾಗಿದ್ದು, ಈಗಾಗಲೇ ಅವರು ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಸ್ವತಃ ಸಿಎಂ ಅವರೇ ಹೇಳಿರುವುದರಿಂದ, ಅವರು ಪೂರ್ಣಾವಧಿ ಅಧಿಕಾರದಲ್ಲಿ ಇರುತ್ತಾರೆ ಎಂಬ ದೃಢ ನಂಬಿಕೆ ನಮಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುರಿತು ಮಾತನಾಡಿದ ರಾಜೇಂದ್ರ, ಶಿವಕುಮಾರ್ ಅವರು ಸಿಎಂ ಆಗುವುದಕ್ಕೆ ಯಾರ ವಿರೋಧವೂ ಇಲ್ಲ, ಅಂತಿಮವಾಗಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು. ನನ್ನ ತಂದೆ ಕೆ.ಎನ್. ರಾಜಣ್ಣ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ವೈಯಕ್ತಿಕ ಜಗಳಗಳಿಲ್ಲ. ಅವರಿಬ್ಬರು ಹಳೆಯ ಸ್ನೇಹಿತರಾಗಿದ್ದು, ರಾಜಕೀಯ ನಿಲುವುಗಳಲ್ಲಿ ಮಾತ್ರ ಭಿನ್ನಾಭಿಪ್ರಾಯಗಳಿರಬಹುದು. ಹೊರನೋಟಕ್ಕೆ ಏನೇ ಕಂಡರೂ ಅವರಿಬ್ಬರ ಸಂಬಂಧ ಅನ್ಯೋನ್ಯವಾಗಿದೆ ಎಂದು ಸ್ಪಷ್ಟಪಡಿಸಿದರು.

ತಮ್ಮ ತಂದೆಯ ಸಚಿವ ಸ್ಥಾನದ ಬಗ್ಗೆಯೂ ಮಾತನಾಡಿದ ಅವರು, ಮುಂದಿನ ಒಂದೆರಡು ತಿಂಗಳಲ್ಲಿ ಕೆ.ಎನ್. ರಾಜಣ್ಣ ಅವರು ಮತ್ತೆ ಸಚಿವರಾಗಿ ಸಂಪುಟ ಸೇರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತು ಮುಖ್ಯಮಂತ್ರಿಗಳು ಕೂಡ ತಮ್ಮ ಬಳಿ ಪ್ರಸ್ತಾಪ ಮಾಡಿದ್ದಾರೆ. ಹಿಂದೆ ಸತ್ಯ ಹೇಳಿದ್ದಕ್ಕೆ ನಮ್ಮ ತಂದೆಯವರನ್ನು ಟಾರ್ಗೆಟ್ ಮಾಡಿ ಸಚಿವ ಸ್ಥಾನದಿಂದ ಇಳಿಸಲಾಗಿತ್ತು. ಕಾಮಾಲೆ ಕಣ್ಣಿನವರಿಗೆ ಎಲ್ಲವೂ ಹಳದಿಯಾಗಿ ಕಾಣುವಂತೆ, ಕೆಲವರಿಗೆ ಸತ್ಯ ಕಹಿಯಾಗಿತ್ತು. ಸದ್ಯ ನಾಯಕ ಸಮುದಾಯಕ್ಕೆ ಸಚಿವ ಸ್ಥಾನದ ಪ್ರಾತಿನಿಧ್ಯದ ಅಗತ್ಯವಿದ್ದು, ಸಮುದಾಯದ ಒತ್ತಾಯವೂ ಹೆಚ್ಚಾಗಿದೆ. ರಾಜಣ್ಣ ಅವರ ಕೆಲಸದ ವೇಗ ಎಂದೂ ಕಡಿಮೆಯಾಗಿಲ್ಲ, ಅವರು ಸಚಿವರಾದ ತಕ್ಷಣ ಆ ವೇಗ ಮತ್ತೆ ಜನರಿಗೆ ತಿಳಿಯಲಿದೆ ಎಂದು ಹೇಳಿದರು.

- ಜಾಹೀರಾತು -

ಮೈಸೂರಿಗೆ ಆಗಮಿಸಿದ್ದ ರಾಜೇಂದ್ರ ಅವರು ಮೈಸೂರು ಸಿಲ್ಕ್ ಮಳಿಗೆಗೆ ಭೇಟಿ ನೀಡಿ ತಮ್ಮ ತಾಯಿಗಾಗಿ ಸೀರೆ ಖರೀದಿಸಿದರು. ಮೈಸೂರು ಸಿಲ್ಕ್ ಸೀರೆಗೆ ತನ್ನದೇ ಆದ ಇತಿಹಾಸವಿದ್ದು, ಭಾರಿ ಬೇಡಿಕೆಯಿದೆ. ಪ್ರಸ್ತುತ ದಿನಕ್ಕೆ 40 ರಿಂದ 50 ಸೀರೆಗಳನ್ನು ಮಾತ್ರ ತಯಾರಿಸಲಾಗುತ್ತಿದೆ, ಉತ್ಪಾದನೆಯನ್ನು ಹೆಚ್ಚಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಕೇಂದ್ರ ಬಜೆಟ್ ರೈತರ ಪಾಲಿಗೆ ಕಣ್ಣೊರೆಸುವ ತಂತ್ರ ; ಹಳ್ಳಿಕೆರೆಹುಂಡಿ ಭಾಗ್ಯರಾಜ್ ತೀವ್ರ ಆಕ್ರೋಶ

February 2, 2026
ಮುಖಪುಟಮೈಸೂರು ನಗರ

ಹೊಸ ವರ್ಷದ ಸಂಭ್ರಮ ; . ಯೋಗ ನರಸಿಂಹಸ್ವಾಮಿ ದೇಗುಲದಲ್ಲಿ ಜನಜಂಗುಳಿ.. 2 ಲಕ್ಷ ಲಡ್ಡು ವಿತರಣೆ..

January 1, 2026
ಮುಖಪುಟಮೈಸೂರು ನಗರ

‘ಗಂಧದ ಗುಡಿ’ ಕನಸಿಗೆ ಶಿವರಾಜ್‌ಕುಮಾರ್ ದ್ರೋಹ? ; ರೆಸಾರ್ಟ್‌ ಪ್ರಚಾರಕ್ಕೆ ವಕೀಲರ ಆಕ್ಷೇಪ

November 4, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು ಫ್ಲೈ ಓವರ್ ವಿರೋಧಿಸಿ ಕಾನೂನಾತ್ಮಕ ಹೋರಾಟ : ಸಂಸದ ಯದುವೀರ್ ಎಚ್ಚರಿಕೆ

November 5, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?