PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ: ವಿ ಸೋಮಣ್ಣ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ: ವಿ ಸೋಮಣ್ಣ
ಜಿಲ್ಲೆ

ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ: ವಿ ಸೋಮಣ್ಣ

Prathinidhi News
Last updated: January 6, 2024 12:20 pm
Prathinidhi News
Published January 6, 2024
Share
SHARE

ಬೆಂಗಳೂರು, ಜನವರಿ 06: ನನ್ನ ಸೋಲಿಗೆ ಯಾರು ಯಾರು ಕಾರಣ ಅಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಅವರಿಗೆ ಗೊತ್ತಿದೆ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ನಾನು ಸಿಡಿದೇಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರಿಪಡಿಸುವುದು, ಬಿಡುವುದು ಅವರಿಗೆ ಸೇರಿದ್ದು ಎಂದರು.

ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.

ನಮ್ಮಂತಹವರ ಮೇಲೆ ಗದಾಪ್ರಹಾರ ಆದರೆ ಪರಿಣಾಮ ಆಗುತ್ತದೆ. ಎಷ್ಟರ ಮಟ್ಟಿಗೆ ಪರಿಣಾಮ ಆಗುತ್ತದೆ ಅಂತಾ ಚಿಂತನೆ ಮಾಡಬೇಕು. ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಹಿಂದಿನದ್ದೇ ನಡೆಸಿಕೊಂಡು ಹೋಗುತ್ತೇನೆ ಎಂಬುದನ್ನು ಬಿಡಬೇಕು. ಚಾಮರಾಜನಗರ ಜಿಲ್ಲೆಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು ವಿಜಯೇಂದ್ರ ರಾಜ್ಯಾಧ್ಯಕ್ಷರು, ಎಲ್ಲಿಗೆ ಬೇಕಾದರೂ ಹೋಗಲಿ ಎಂದು ಮಾತನಾಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ

December 1, 2023
ಜಿಲ್ಲೆ

ನಂಜನಗೂಡು ಬಂದ್ ನಿಂದ ಸ್ಥಳೀಯರಿಗೆ ತೊಂದರೆ: ಸಮಸ್ಯೆ ಬಗೆಹರಿಸಲು ಶಾಂತಿ ಸಭೆ- ಶಾಸಕ ದರ್ಶನ್ ಧ್ರುವನಾರಾಯಣ್

January 3, 2024
ಜಿಲ್ಲೆ

ವಿಜಯ್‌ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿ: ಇಂದು ಕರ್ನಾಟಕ vs ಉತ್ತರಖಂಡ ಫೈಟ್

November 25, 2023
ಜಿಲ್ಲೆ

BUDGET REACTION 2024 : ಈ ಬಾರಿ ಅರ್ಥ ಪೂರ್ಣ ಆರ್ಥಿಕ ಲೆಕ್ಕಾಚಾರದ ಬಜೆಟ್ ಮಂಡಿಸಿದ್ದಾರೆ – ಮಾಜಿ ಜಿ.ಪಂ ಉಪಾಧ್ಯಕ್ಷೆ ಅನಂತಕುಮಾರಿ ಚಿನ್ನಪ್ಪ

February 16, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?