ಮೈಸೂರು, ನವೆಂಬರ್ 11, 2025 : ರಾಜ್ಯ ಹಾಗೂ ಮೈಸೂರು ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿನಿಧಿ ಫೌಂಡೇಶನ್ ಮತ್ತು ಜಿಎಸ್ಎಸ್ ಮಾಧ್ಯಮದ ಸಂಯುಕ್ತಾಶ್ರಯದಲ್ಲಿ ಸನ್ಮಾನ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್‌ನ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿ, ಅಭಿನಂದಿಸಲಾಯಿತು.
ಸಮಾರಂಭದಲ್ಲಿ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕನ್ನಡಪ್ರಭ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ಅಂಶಿಪ್ರಸನ್ನಕುಮಾರ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಅದೇ ರೀತಿ, ಮೈಸೂರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಹಿರಿಯ ಪತ್ರಕರ್ತರಾದ ದಯಾಶಂಕರ್ ಮೈಲಿ, ಧರ್ಮಾಪುರ ನಾರಾಯಣ್, ಶೇಖರ್ ಕಿರುಗುಂದ, ಮಹೇಶ್ ಭಗೀರಥ, ಇ. ಕಾರ್ತಿಕ್, ಸುಧೀಂದ್ರ ಕುಮಾರ್, ಹಂಪಾ ನಾಗರಾಜು, ಎಂ.ಟಿ. ಯೋಗೇಶ್ ಕುಮಾರ್, ವೀರಭದ್ರಪ್ಪ ಬಿಸ್ಲಳ್ಳಿ, ಹೆಚ್.ಎಸ್. ದಿನೇಶ್ ಕುಮಾರ್, ಕೆ.ಬಿ. ರಮೇಶ್ ನಾಯಕ್, ಹಾಗೂ ಶ್ರೀರಾಮ್ ಅವರನ್ನೂ ಸಹ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರತಿನಿಧಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಸಿ.ಕೆ. ಮಹೇಂದ್ರ, ಜಿಎಸ್ಎಸ್ ಮಾಧ್ಯಮ ಸಮೂಹದ ಮುಖ್ಯಸ್ಥ ಶ್ರೀಹರಿ ದ್ವಾರಕಾನಾಥ್, ವಾರ್ತಾ ಇಲಾಖೆಯ ಉಪ ನಿರ್ದೇಶಕ ವಿನೋದ್ ಚಂದ್ರ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಸೇರಿದಂತೆ ಹಲವು ಪ್ರಮುಖರು, ಗಣ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು. ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಪ್ರಶಸ್ತಿ ಪಡೆದ ಪುರಸ್ಕೃತರ ಕಾರ್ಯವನ್ನು ಗಣ್ಯರು ಶ್ಲಾಘಿಸಿ, ಶುಭ ಹಾರೈಸಿದರು.
