PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಯೋಜನೆಗಳು ಜನರಿಗೆ ತಲುಪಬೇಕಾದರೆ ಕಾಂಗ್ರೆಸ್ ಬೆಂಬಲಿಸಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಯೋಜನೆಗಳು ಜನರಿಗೆ ತಲುಪಬೇಕಾದರೆ ಕಾಂಗ್ರೆಸ್ ಬೆಂಬಲಿಸಿ
ಸಮಗ್ರ

ಯೋಜನೆಗಳು ಜನರಿಗೆ ತಲುಪಬೇಕಾದರೆ ಕಾಂಗ್ರೆಸ್ ಬೆಂಬಲಿಸಿ

ಪ್ರತಿನಿಧಿ
Last updated: April 18, 2024 6:25 pm
ಪ್ರತಿನಿಧಿ
Published April 18, 2024
Share
SHARE

ದೇವನಹಳ್ಳಿ/ವಿಜಯಪುರ: ಪಟ್ಟಣದ ಬೈಪಾಸ್ ರಸ್ತೆಯ ಗೀತಾ ಕನ್ವೆನ್ಷನ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಯಿತು.

ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ದೇವನಹಳ್ಳಿ ತಾಲೂಕಿನಿಂದ 25 ಸಾವಿರ ಲೀಡ್ ಕೊಡಬೇಕು. ಆಗ ರಸ್ತೆ ನಿರ್ಮಿಸಲು ಹಾಗೂ ನೀರಿನ ಬವಣೆ ನೀಗಿಸಲು ಕೆರೆಗಳಲ್ಲಿ ನೀರು ಉಳಿಯಲು ಹೂಳೆತ್ತುವ ಕೆಲಸಕ್ಕೆ ಹಣ ಕ್ರೋಢಿಕರಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಎಲ್ಲವನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳುತ್ತೇವೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆ ಪಡೆದು ಅನುಕೂಲ ಪಡೆದಂತೆ ಕೇಂದ್ರದಿಂದಲೂ ಅನೇಕ‌ಯೋಜನೆಗಳು ಜನರಿಗೆ ತಲುಪಬೇಕಾದರೆ ಕಾಂಗ್ರೆಸ್ ಬೆಂಬಲಿಸಿ ಎಂದು ತಿಳಿಸಿದರು.

ಮಾಜಿ ಶಾಸಕ ಮುನಿನರಸಿಂಹಯ್ಯ ಮಾತನಾಡಿ, ರಾಜ್ಯದಲ್ಲಿ ಐದು ಗ್ಯಾರಂಟಿಗಳ ಯೋಜನೆ ಅನುಷ್ಠಾನ ಗೊಳಿಸಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸಿ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ ಅದರಂತೆ ಕೇಂದ್ರದ ಗ್ಯಾರಂಟಿಗಳ ಉಪಯೋಗ ಪಡೆಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಜತೆಯಲ್ಲಿ ನಮ್ಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ನವರಿಗೆ ನಿಮ್ಮೆಲ್ಲರ ಮತ ಹಾಕಿ ದೆಹಲಿಗೆ ಕಳಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಬಿಜೆಪಿ ಸರ್ಕಾರ ಹಣವಂತರ ಪರವಾದ ಸರ್ಕಾರ ಅಂಬಾನಿ‌,ಅದಾನಿ, ಯಂತಹ ಬಂಡವಾಳ ಶಾಹಿಗಳ ಪರವಾಗಿ ಅವರಿಗೆ ಅನುಕೂಲವಾಗುವಂತೆ ತೆರಿಗೆ ವಿನಾಯಿತಿ ನೀಡುವುದು ಮಾಡಿದ್ದಾರೆ ರೈತರಿಗೆ ಸಾಲ ಮನ್ನಾ ಮಾಡಿಲ್ಲಾ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಮಧ್ಯಮ ಮತ್ತು ಬಡ ಜನರಿಗೆ ಅನುಕೂಲವಾದ ಆಡಳಿತ ನೀಡಿದ್ದು ಕಳೆದ ಹತ್ತು ವರ್ಷಗಳಿಂದ ಪೆಟ್ರೋಲ್ ಬೆಲೆ ದಿನನಿತ್ಯ ಬಳಕೆ ಮಾಡುವ ವಸ್ತುಗಳ ಮತ್ತು ಗ್ಯಾಸ್ ಬೆಲೆ ಕೈಗೆಟುಕದಂತೆ ಮಾಡಿರುವ ಸಾಧನೆ ಬಿಜೆಪಿ ಪಕ್ಷಕ್ಕೆ ಸೇರಿದ್ದಾಗಿದೆ ಎಂದು‌ಲೇವಡಿ ಮಾಡಿದರು.

- ಜಾಹೀರಾತು -

ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಮುಭಾರಕ್,ಟೌನ್ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಮಂಜುನಾಥ್, ಪುರಸಭಾ ಸದಸ್ಯರು ಇದ್ದರು.

 

1804ವಿಜೆಆರ್ ಪಿ: ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯ ಗೀತಾ ಕನ್ವೆನ್ಷನ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಸಮಗ್ರ

ಬೀದರ್​ನಲ್ಲಿ ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

May 13, 2024
ಸಮಗ್ರ

ಕೋಮುವಾದಿಯೊಂದಿಗೆ ಜೆಡಿಎಸ್‌ ಮೈತ್ರಿ

April 3, 2024
ಸಮಗ್ರ

ಅರಣ್ಯ ಸ್ವಚ್ಛತಾ ಕಾರ್ಯಕ್ರಮ

May 25, 2024
ಅಂಕಣಜಿಲ್ಲೆಭಾರತ ತಿಳಿಸನ್ನಿಧಾನಸನ್ನಿಧಾನಸಂಪಾದಕೀಯಸಮಗ್ರಸಹಕಾರ ನೋಟ

ನಾಲ್ಕು ವರ್ಷದ ಒಳಗಿನ ಮಕ್ಕಳಿಗೆ ಶೀತದ ಸಿರಪ್ ನಿಷೇಧ

December 21, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?