PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಂಡ್ಯ ಅಬಕಾರಿ ಇಲಾಖೆಯಲ್ಲಿ ಲಂಚಾವತಾರ: 60 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಡಿಸಿ ನಾಗಶಯನ ಅಮಾನತು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಮಂಡ್ಯ ಅಬಕಾರಿ ಇಲಾಖೆಯಲ್ಲಿ ಲಂಚಾವತಾರ: 60 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಡಿಸಿ ನಾಗಶಯನ ಅಮಾನತು
ಮಂಡ್ಯಮುಖಪುಟ

ಮಂಡ್ಯ ಅಬಕಾರಿ ಇಲಾಖೆಯಲ್ಲಿ ಲಂಚಾವತಾರ: 60 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಡಿಸಿ ನಾಗಶಯನ ಅಮಾನತು

Prathinidhi News
Last updated: February 5, 2026 11:07 am
Prathinidhi News
Published February 5, 2026
Share
SHARE

ಮಂಡ್ಯ, ಫೆಬ್ರವರಿ 5, 2026  : ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ಜಾಲವೊಂದು ಬಯಲಾಗಿದ್ದು, ಹೊಸ ಬಾರ್ ಲೈಸೆನ್ಸ್ ನೀಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಉಪ ಆಯುಕ್ತ (ಡಿಸಿ) ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಇದು ಮಂಡ್ಯ ಅಬಕಾರಿ ಇಲಾಖೆಯ ಲಂಚಗುಳಿತನಕ್ಕೆ ಮತ್ತೊಂದು ತಾಜಾ ಉದಾಹರಣೆಯಾಗಿ ನಿಂತಿದೆ.

ಕೆ.ಆರ್. ಪೇಟೆಯ ಸೋಮನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಸಿಎಲ್-7 ಬಾರ್ ಲೈಸೆನ್ಸ್ ಪಡೆಯಲು ಸುಂದರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಆದರೆ, ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಾಗಶಯನ ಅವರು ಬರೊಬ್ಬರಿ 60 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಾಯಿಸಿದ್ದರು. ಲೈಸೆನ್ಸ್ ನೀಡುವಂತೆ ನ್ಯಾಯಾಲಯವೇ ಆದೇಶ ನೀಡಿದ್ದರೂ ಸಹ, ಅಧಿಕಾರಿ ಮಾತ್ರ ಸಣ್ಣಪುಟ್ಟ ತಾಂತ್ರಿಕ ನೆಪಗಳನ್ನು ಹೇಳಿಕೊಂಡು ಸುಂದರ್ ಅವರ ಅರ್ಜಿಯನ್ನು ಪದೇ ಪದೇ ವಜಾ ಮಾಡುತ್ತಾ ಸತಾಯಿಸುತ್ತಿದ್ದರು.

ಅಧಿಕಾರಿಯ ಕಿರುಕುಳದಿಂದ ಬೇಸತ್ತ ಸುಂದರ್ ಅವರು, ಲಂಚದ ಬೇಡಿಕೆಯ ಆಡಿಯೋ ಸಂಭಾಷಣೆಯನ್ನು ಸಾಕ್ಷ್ಯವಾಗಿಟ್ಟುಕೊಂಡು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕಳೆದ ಒಂದು ವರ್ಷದಿಂದ ಈ ಭ್ರಷ್ಟಾಚಾರದ ವಿರುದ್ಧ ಅವರು ನಿರಂತರವಾಗಿ ಕಾನೂನು ಹೋರಾಟ ನಡೆಸುತ್ತಾ ಬಂದಿದ್ದರು. ಈ ಗಂಭೀರ ಪ್ರಕರಣವು ರಾಜ್ಯ ವಿಧಾನಮಂಡಲದ ಸದನದಲ್ಲೂ ಚರ್ಚೆಯಾಗಿ ಸರ್ಕಾರದ ಗಮನ ಸೆಳೆದಿತ್ತು. ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸರ್ಕಾರ, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಗಶಯನ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ನಗರದ ವಿವಿಧೆಡೆ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ

February 5, 2026
ಮುಖಪುಟಮೈಸೂರು ನಗರ

ಮೈಸೂರು ಮೃಗಾಲಯದ ಎರೆಹುಳು ಗೊಬ್ಬರಕ್ಕೆ ಭಾರೀ ಬೇಡಿಕೆ: ರೈತರಿಗೆ ಕಡಿಮೆ ಬೆಲೆಯಲ್ಲಿ ಲಭ್ಯ!

November 15, 2025
ಮುಖಪುಟಶಿವಮೊಗ್ಗ

ಶಿವಮೊಗ್ಗ : ಮಲೆನಾಡು ಕಾಡಂಚಿನ ಭಾಗದಲ್ಲಿ ಆತಂಕ ; 8 ಮಂಗನ ಖಾಯಿಲೆ ಪಾಸಿಟಿವ್‌ ಕೇಸ್‌ !

December 17, 2025
ಮುಖಪುಟಮೈಸೂರು ನಗರ

ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಎನ್‌ಸಿಬಿ ತಪಾಸಣೆ: ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಕಮಿಷನರ್ ಸ್ಪಷ್ಟನೆ

January 29, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?