PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಇಂಧನ ಕ್ಷೇತ್ರದ ಖಾಸಗೀಕರಣಕ್ಕೆ ಕೆಇಬಿ ನೌಕರರ ಯೂನಿಯನ್ ಹಾಗೂ ಸಂಘ ಸಂಸ್ಥೆಗಳ ಒಕ್ಕೂಟದಿಂದ ವಿರೋಧ ; ಸಾಂಕೇತಿಕ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಇಂಧನ ಕ್ಷೇತ್ರದ ಖಾಸಗೀಕರಣಕ್ಕೆ ಕೆಇಬಿ ನೌಕರರ ಯೂನಿಯನ್ ಹಾಗೂ ಸಂಘ ಸಂಸ್ಥೆಗಳ ಒಕ್ಕೂಟದಿಂದ ವಿರೋಧ ; ಸಾಂಕೇತಿಕ ಪ್ರತಿಭಟನೆ
ಮುಖಪುಟಮೈಸೂರು ನಗರ

ಇಂಧನ ಕ್ಷೇತ್ರದ ಖಾಸಗೀಕರಣಕ್ಕೆ ಕೆಇಬಿ ನೌಕರರ ಯೂನಿಯನ್ ಹಾಗೂ ಸಂಘ ಸಂಸ್ಥೆಗಳ ಒಕ್ಕೂಟದಿಂದ ವಿರೋಧ ; ಸಾಂಕೇತಿಕ ಪ್ರತಿಭಟನೆ

Prathinidhi News
Last updated: February 12, 2026 3:40 pm
Prathinidhi News
Published February 12, 2026
Share
SHARE

ಮೈಸೂರು, ಫೆ.12, 2026: ಕೇಂದ್ರ ಸರ್ಕಾರ ವಿದ್ಯುತ್‌ ಕ್ಷೇತ್ರದ ಖಾಸಗೀಕರಣಕ್ಕೆ ಮುಂದಾಗಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ವಿದ್ಯುಚ್ಚಕ್ತಿ ಮಂಡಳಿಯ ನೌಕರರ ಯೂನಿಯನ್ ಹಾಗೂ ಸಂಘ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಗುರುವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಪ್ರಧಾನ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು, ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ವಿದ್ಯುತ್ ಕ್ಷೇತ್ರದ ಖಾಸಗೀಕರಣ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿದರು.

ಕೇಂದ್ರ ಸರ್ಕಾರ ಇಂಧನ ಇಲಾಖೆಯನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ 2026ರ ಅಧೀವೇಶನದಲ್ಲಿ ವಿದ್ಯುತ್ ಕಾಯಿದೆ ಪಾಸ್ ಮಾಡಲು ಹೊರಟಿರುವುದು ಖಂಡನೀಯ. ವಿದ್ಯುತ್ ಇಲಾಖೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿರುವ ಕೇಂದ್ರದ ನಿರ್ಧಾರಕ್ಕೆ ನಮ್ಮ ಧಿಕ್ಕಾರವಿದೆ. ಇಂಧನ ಇಲಾಖೆ ಜನರ ಆಸ್ತಿಯಾಗಿದ್ದು, ಯಾವುದೇ ಕಾರಣಕ್ಕೂ ಇದನ್ನು ಖಾಸಗೀಕರಣಗೊಳಿಸಬಾರದು. ಅನ್ನದಾತರಾದ ರೈತರಿಗೆ ಹಾಗೂ ಗ್ರಾಹಕರಿಗೆ ಅನ್ಯಾಯ ಮಾಡಿ ಅಧಿವೇಶನದಲ್ಲಿ ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಕೈಬಿಡಬೇಕಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಚಾವಿಸನಿನಿ ವ್ಯವಸ್ಥಾಪಕ ನಿರ್ದೇಶಕರ ಪರವಾಗಿ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಚಾವಿಸನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಡಾ.ಬಿ.ಆರ್.ರೂಪ ಅವರಿಗೆ, ತಮ್ಮ ಬೇಡಿಕೆಗಳ ಈಡೇರಿಸುವ ಕುರಿತು ಸೂಕ್ತ ಕ್ರಮವಹಿಸುವಂತೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಆರ್. ವಿ.ದೇವರಾಜು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ..!

December 2, 2025
ನಂಜನಗೂಡುಮುಖಪುಟ

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ; ಮಗು, ತಂದೆ ,ತಾಯಿಗೆ ಗಾಯ!

January 31, 2026
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ: ಕಾಂಗ್ರೆಸ್ ಶಾಸಕರ ನಡವಳಿಕೆಗೆ ತೀವ್ರ ಆಕ್ರೋಶ

January 22, 2026
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ನಂಜನಗೂಡಿನಲ್ಲಿ ಸರಣಿ ಕಳ್ಳತನ: ಪೊಲೀಸ್ ಠಾಣೆ ಸಮೀಪವೇ 14 ಅಂಗಡಿಗಳ ಬೀಗ ಮುರಿದ ಖದೀಮರು!

December 31, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?