ಟಿ. ನರಸೀಪುರ, ಜುಲೈ 3, 2026 : ಶಾಲಾ-ಕಾಲೇಜುಗಳ ಮುಂಭಾಗದಲ್ಲಿ ಕರ್ಕಶ ಶಬ್ದ ಮಾಡುತ್ತಾ ಸಂಚರಿಸುತ್ತಿದ್ದ ಬೈಕ್‌ನ್ನು ಟಿ. ನರಸೀಪುರ ಪೊಲೀಸರು ವಶಕ್ಕೆ ಪಡೆದು ಸವಾರನಿಗೆ ದಂಡ ವಿಧಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಬೈಕ್‌ನ ಸೈಲೆನ್ಸರ್‌ನ್ನು ನಿಯಮಬಾಹಿರವಾಗಿ ಬದಲಾಯಿಸಿಕೊಂಡು ಅತಿಯಾದ ಶಬ್ದ ಉಂಟು ಮಾಡುತ್ತಾ ವಾಹನ ಚಲಾಯಿಸುತ್ತಿದ್ದ ಸವಾರನನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದರು. ಬಳಿಕ ವಾಹನವನ್ನು ವಶಕ್ಕೆ ಪಡೆದು ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಿದರು.
ಸಾರ್ವಜನಿಕರಿಗೆ, ವಿಶೇಷವಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಕರ್ಕಶ ಶಬ್ದ ಮಾಡುವ ವಾಹನಗಳ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
