PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಕಲಿಸಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಕಲಿಸಿ
ಸಮಗ್ರ

ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಕಲಿಸಿ

ಪ್ರತಿನಿಧಿ
Last updated: April 5, 2024 5:19 pm
ಪ್ರತಿನಿಧಿ
Published April 5, 2024
Share
SHARE

ಕನಕಪುರ ದೇಗುಲ ಮಠದ  ಚನ್ನಬಸವ ಸ್ವಾಮೀಜಿ ಸಲಹೆ

ಪ್ರತಿನಿಧಿ ವರದಿ ರಾಮನಗರ

ತಾಯಂದಿರು ಮಕ್ಕಳಿಗೆ ಧಾರ್ಮಿಕ ಸಂಸ್ಕಾರದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಅಗತ್ಯವಿದೆ ಎಂದು ಕನಕಪುರ ದೇಗುಲ ಮಠದ  ಚನ್ನಬಸವ ಸ್ವಾಮೀಜಿ ತಿಳಿಸಿದರು.

ತಾಲೂಕಿನ ದೊಡ್ಡಗಂಗವಾಡಿ ಗ್ರಾಮದಲ್ಲಿ ಶುಕ್ರವಾರ ನಡೆದ ಧಾರ್ಮಿಕ ಸಂಸ್ಕಾರಗಳು ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಇಂದು ಸಾಮಾಜಿಕ ಹಾಗೂ ಸಾಂಪ್ರಾದಾಯಿಕ ಶಿಕ್ಷಣದ ಜತೆಗೆ ಧಾರ್ಮಿಕ ಸಂಸ್ಕಾರದ ಬಗ್ಗೆ ಅರಿವು ನೀಡುವುದು ಹೆಚ್ಚು ಅಗತ್ಯವಿದೆ. ಆ ಕೆಲಸ ಬೇರಾರಿಂದಲೂ ಸಾಧ್ಯವಿಲ್ಲ. ತಾಯಂದಿರಿಂದ ಮಾತ್ರ ಅದು ಸಾಧ್ಯ ಎಂದರು.

- ಜಾಹೀರಾತು -

ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರದ ಬಗ್ಗೆ ಅರಿವು ಮೂಡಿಸಿದರೆ ದೇಶದ ಪ್ರಗತಿಯೂ ಸಾಧ್ಯ. ಶಾಲಾ- ಕಾಲೇಜುಗಳಲ್ಲಿ ಕಲಿಯುವ ವಿದ್ಯೆ ಬದುಕಲು ಕಲಿಸುತ್ತದೆ. ಆದರೆ, ಧಾರ್ಮಿಕ ಸಂಸ್ಕಾರ ಬದುಕಿಗೇ ಬುನಾದಿಯಾಗುತ್ತದೆ. ಜೀವನದ ಪಾಠವನ್ನು ಕಲಿಸುತ್ತದೆ ಎಂದರು.

ಅಕ್ಕ ಮಹಾದೇವಿ, ಬಸವಣ್ಣ ಅವರ ವಚನಗಳನ್ನು ಅಳವಡಿಸಿಕೊಂಡು, ಶರಣರು ಸಾರಿರುವ ಸಂದೇಶವನ್ನು ಮತ್ತೆ ಸಾರುವ ಕ್ರಾಂತಿಯಾಗಬೇಕು. ಈ ಮೂಲಕ ಮಕ್ಕಳು ಸೇರಿ ಪ್ರತಿಯೊಬ್ಬರಲ್ಲೂ ವಚನಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ತಿಳಿಸಿದರು.

ಯುವಕರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಂಡು ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಇಂದಿನ ಯುವಕರು ಮೊಬೈಲ್, ಟಿವಿ, ಇಂಟರ್ ನೆಟ್‌ನಲ್ಲಿ ಕಾಲಹರಣ ಮಾಡುತ್ತಿರುವುದು ವಿಷಾಧನೀಯ. ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಜತೆಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು. ವಿನಯತೆ, ಸೌಜನ್ಯತೆ, ಮಾನವೀಯತೆ, ಪ್ರಾಮಾಣಿಕತೆ, ಬದ್ಧತೆಯ ನಡೆತೆ ಕಲಿಸಬೇಕು ಎಂದರು.

ಸಾಹಿತಿ ಡಾ.ಸಿ.ಶಿವಕುಮಾರಸ್ವಾಮಿ ಮಾತನಾಡಿ, ಇಂದಿನ ಯುಗದಲ್ಲಿ ಪ್ರತಿಯೊಬ್ಬರೂ ಒಳ್ಳೆಯ ರೀತಿಯಿಂದ ಬದುಕಬೇಕಾಗಿದೆ. ಇವತ್ತಿನ ಕಂಪ್ಯೂಟರ್ ಯುಗದಲ್ಲಿ ಮನುಷ್ಯನ ಜೀವನದಲ್ಲಿ ನೆಮ್ಮದಿ ಸಿಗುವುದು ಬಹಳ ಕಷ್ಟ. ಅದಕ್ಕಾಗಿ ನಾವೆಲ್ಲರೂ ಉತ್ತಮ ಸಂಸ್ಕಾರದೊಂದಿಗೆ ಜೀವನ ನಡೆಸಿದರೆ ಜೀವನ ಪಾವನ ಎಂದರು.

ನಾವೆಲ್ಲರೂ ಒಳ್ಳೆಯ ಮಾರ್ಗ ಹಿಡಿದು ನಡೆದಾಗ ಜೀವನದಲ್ಲಿ ಯಶಸ್ವಿ ಕಾಣಲು ಸಾಧ್ಯ. ಜೀವನದಲ್ಲಿ ಏನೇ ಕಷ್ಟ ಬಂದರೆ ಪರಿಹಾರ ಗುರುವಿನಿಂದ ಸಿಗುತ್ತದೆ. ಆ ಗುರುವನ್ನು ಒಳ್ಳೆ ರೀತಿಯಿಂದ ಕಾಣಬೇಕು ಎಂದು ತಿಳಿಸಿದರು.

ಅತ್ತಿಹಳ್ಳಿ ಮಠದ ನಿರಂಜನ ಸ್ವಾಮೀಜಿ, ಸಾಹಿತಿ ಡಾ.ಸಿ.ಶಿವಕುಮಾರಸ್ವಾಮಿ, ಮುಖಂಡರಾದ ಸಿ. ವೀರಣ್ಣ, ಸಿ.ಮಲ್ಲಿಕಾರ್ಜುನಯ್ಯ, ಸಿ. ಉಮಾಶಂಕರಸ್ವಾಮಿ, ಸಿ.ಜಯಣ್ಣ, ಡಿ.ಸಿ.ಗೌರಿಶಂಕರಸ್ವಾಮಿ, ಶಶಿಧರ ಇತರರು ಇದ್ದರು.

ಫೋಟೊ ಕ್ಯಾಪ್ಷನ್‌: ಧಾರ್ಮಿಕ ಸಂಸ್ಕಾರಗಳು ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಕನಕಪುರ ದೇಗುಲ ಮಠದ ಕಿರಿಶ್ರೀಗಳಾದ ಚನ್ನಬಸವಸ್ವಾಮೀಜಿ ಮಾತನಾಡಿದರು.
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಆರೋಗ್ಯ ಕ್ಷೇತ್ರಕ್ಕೆ ಸರ್ಕಾರಗಳ ನಿರ್ಲಕ್ಷ್ಯ

May 8, 2024
ಸಮಗ್ರ

ಜೂ.21ರಂದು ಸರ್ಕಾರಿ ನೌಕರರ ಕ್ರೀಡಾಕೂಟ

May 17, 2024
ಸಮಗ್ರ

 ಭಾರತ ನಂ.1 ಆಗಲು ಮತ್ತೆ ಮೋದಿ ಸರ್ಕಾರ ಬರಬೇಕು

March 26, 2024
ಸಮಗ್ರ

ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ

March 27, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?