PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
ಸಮಗ್ರ

ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

Prathinidhi News
Last updated: December 24, 2023 1:09 pm
Prathinidhi News
Published December 24, 2023
Share
SHARE

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಭಾರತ ಮಹಿಳಾ ತಂಡಾ ಐತಿಹಾಸಿಕ ಗೆಲುವು ದಾಖಲಿಸಿದೆ. ಇದು 50 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಮಹಿಳಾ ತಂಡಕ್ಕೆ ದೊರೆತ ಮೊದಲ ಜಯ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ತಹ್ಲಿಯಾ ಮೆಕ್‌ಗ್ರಾತ್ (50) ಅವರ ಅರ್ಧಶತಕದ ನೆರವಿನಿಂದ 261 ರನ್​ ಕಲೆಹಾಕಿ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಕರಾರುವಾಕ್ ದಾಳಿ ಸಂಘಟಿಸಿದ ಪೂಜಾ 53 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು.

ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 90 ರನ್ ಪೇರಿಸಿದ ಬಳಿಕ ಶಫಾಲಿ ವರ್ಮಾ (40) ವಿಕೆಟ್ ಒಪ್ಪಿಸಿದರು. ಇನ್ನು 74 ರನ್​ಗಳ ಕೊಡುಗೆ ನೀಡಿದ ಸ್ಮೃತಿ ಮಂಧಾನ ರನೌಟ್​ಗೆ ಬಲಿಯಾದರು.

ಆ ಬಳಿಕ ಬ್ಯಾಟ್ ಬೀಸಿದ ರಿಚಾ ಘೋಷ್ (52) ಹಾಗೂ ಜೆಮಿಮಾ ರೊಡ್ರಿಗಾಸ್ (73) ಅರ್ಧಶತಕಗಳನ್ನು ಬಾರಿಸಿ ಮಿಂಚಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಹರ್ಮನ್​ಪ್ರೀತ್ ಕೌರ್ (0) ಹಾಗೂ ಯಾಸ್ತಿಕಾ ಭಾಟಿಯಾ (1) ಬೇಗನೆ ಔಟಾಗಿ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ದೀಪ್ತಿ ಶರ್ಮಾ ಹಾಗೂ ಪೂಜಾ ವಸ್ತ್ರಾಕರ್ ಅರ್ಧಶತಕದ ಜೊತೆಯಾಟದೊಂದಿಗೆ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು. ಅದರಲ್ಲೂ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪ್ತಿ ಶರ್ಮಾ 171 ಎಸೆತಗಳನ್ನು ಎದುರಿಸಿ 9 ಫೋರ್​ಗಳೊಂದಿಗೆ 78 ರನ್ ಬಾರಿಸಿದರು.

ಮತ್ತೊಂದೆಡೆ 9ನೇ ಕ್ರಮಾಂಕದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶಿಸಿದ ಪೂಜಾ 126 ಎಸೆತಗಳನ್ನು ಎದುರಿಸಿ 47 ರನ್​ ಕಲೆಹಾಕಿದರು. ಈ ಮೂಲಕ ಪೂಜಾ-ದೀಪ್ತಿ ಜೋಡಿ ತಂಡದ ಮೊತ್ತವನ್ನು 400ರ ಗಡಿದಾಟಿಸಿದರು. ಅಂತಿಮವಾಗಿ ಭಾರತ ತಂಡವು 406 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 187 ರನ್​ಗಳ ಬೃಹತ್ ಮುನ್ನಡೆ ಸಾಧಿಸಿತು.

- ಜಾಹೀರಾತು -

187 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಟೀಮ್ ಇಂಡಿಯಾ ವನಿತೆಯರ ಕರಾರುವಾಕ್ ದಾಳಿಗೆ ಕ್ರೀಸ್ ಕಚ್ಚಿ ನಿಲ್ಲಲು ಆಸೀಸ್ ಬ್ಯಾಟರ್​ಗಳು ತಡಕಾಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ತಹ್ಲಿಯಾ ಮೆಕ್​ಗ್ರಾಥ್ ಮತ್ತೊಮ್ಮೆ ಆಸ್ಟ್ರೇಲಿಯಾ ತಂಡಕ್ಕೆ ಆಸರೆಯಾದರು. 177 ಎಸೆತಗಳನ್ನು ಎದುರಿಸಿದ ತಹ್ಲಿಯಾ 73 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

ಅದರಂತೆ 3ನೇ ದಿನದಾಟದ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡವು 5 ವಿಕೆಟ್ ಕಳೆದುಕೊಂಡು 233 ರನ್ ಪೇರಿಸಿತು. ಆದರೆ 4ನೇ ದಿನದಾಟದ ಆರಂಭದಲ್ಲೇ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಡುವಲ್ಲಿ ಪೂಜಾ ವಸ್ತ್ರಾಕರ್ ಯಶಸ್ವಿಯಾದರು. ಅಷ್ಟೇ ಅಲ್ಲದೆ ತಂಡದ ಮೊತ್ತಕ್ಕೆ 28 ರನ್​ ಸೇರಿಸಿ ಆಸ್ಟ್ರೇಲಿಯಾ ತಂಡವು 261 ರನ್​ಗಳಿಗೆ ಆಲೌಟ್ ಆಯಿತು. ಭಾರತ ತಂಡದ ಪರ ಸ್ನೇಹ ರಾಣಾ 63 ರನ್​ಗಳಿಗೆ 4 ವಿಕೆಟ್ ಕಬಳಿಸಿ ಮಿಂಚಿದರು.

ಇತ್ತ ಮೊದಲ ಇನಿಂಗ್ಸ್​ನ 187 ರನ್​ಗಳ ಮುನ್ನಡೆಯೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 75 ರನ್​ಗಳ ಗುರಿ ಪಡೆಯಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಕೇವಲ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ಸ್ಮೃತಿ ಮಂಧಾನ ಹಾಗೂ ರಿಚಾ ಘೋಷ್ ಅರ್ಧಶತಕದ ಜೊತೆಯಾಟವಾಡಿದರು. ಈ ಮೂಲಕ ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡು 75 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದು ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾದ ಮೊದಲ ಟೆಸ್ಟ್ ಗೆಲುವು ಎಂಬುದು ವಿಶೇಷ.

ಭಾರತ ಪ್ಲೇಯಿಂಗ್ ಇಲೆವೆನ್: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಜೆಮಿಮಾ ರೊಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್) , ರಿಚಾ ಘೋಷ್ , ದೀಪ್ತಿ ಶರ್ಮಾ , ಸ್ನೇಹ ರಾಣಾ , ಪೂಜಾ ವಸ್ತ್ರಾಕರ್ , ರೇಣುಕಾ ಠಾಕೂರ್ ಸಿಂಗ್ , ರಾಜೇಶ್ವರಿ ಗಾಯಕ್ವಾಡ್.

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಬೆತ್ ಮೂನಿ , ಫೋಬೆ ಲಿಚ್‌ಫೀಲ್ಡ್ , ಎಲ್ಲಿಸ್ ಪೆರ್ರಿ , ತಹ್ಲಿಯಾ ಮೆಕ್‌ಗ್ರಾತ್ , ಅಲಿಸ್ಸಾ ಹೀಲಿ (ನಾಯಕಿ) , ಅನ್ನಾಬೆಲ್ ಸದರ್ಲ್ಯಾಂಡ್ , ಆಶ್ಲೀ ಗಾರ್ಡ್ನರ್ , ಜೆಸ್ ಜೊನಾಸೆನ್ , ಅಲಾನಾ ಕಿಂಗ್ , ಕಿಮ್ ಗಾರ್ತ್ , ಲಾರೆನ್ ಚೀಟಲ್.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

 ಭಾರತ ನಂ.1 ಆಗಲು ಮತ್ತೆ ಮೋದಿ ಸರ್ಕಾರ ಬರಬೇಕು

March 26, 2024
ಸಮಗ್ರ

ಗೌರಿ ಲಂಕೇಶ್‌, ಕಲಬುರ್ಗಿ ಹತ್ಯೆ ಕೇಸ್‌ ವಿಚಾರಣೆಗೆ ಸ್ಪೆಷಲ್ ಕೋರ್ಟ್: ಸಿಎಂ ಸಿದ್ದರಾಮಯ್ಯ ಆದೇಶ

December 7, 2023
ಸಮಗ್ರ

ಕ್ಯಾನ್ಸರ್ ಮತ್ತು ಮಧುಮೇಹ ತಡೆಗೆ ಒಪ್ಪಂದ

July 11, 2024
ಸಮಗ್ರ

ಗೌತಮ್ ಪರವಾಗಿ ಡಿಸಿಎಂ ಡಿಕೆಶಿ ರೋಡ್ ಶೋ

April 4, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?