ಟಿ. ನರಸೀಪುರ, ಏಪ್ರಿಲ್ 13, 2026 : ಮೈಸೂರು-ಟಿ. ನರಸೀಪುರ ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಟಿ. ನರಸೀಪುರ ತಾಲ್ಲೂಕಿನ ಇಂಡವಾಳು ಗ್ರಾಮದ ನಿವಾಸಿ ಮೂರ್ತಿ (55) ಎಂದು ಗುರುತಿಸಲಾಗಿದೆ.

ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಂಜುಳಾ ಎಂಬ ಯುವತಿಗೂ ಅಪಘಾತದಿಂದ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಘಟನೆಯು ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
