PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ಫ್ರೆಂಡ್ಸ್ ಜತೆ ಟೀ ಕುಡಿಯಲು ಹೋದ ಯುವಕನ ಬರ್ಬರ ಕೊ*ಲೆ..! ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮೈಸೂರು : ಫ್ರೆಂಡ್ಸ್ ಜತೆ ಟೀ ಕುಡಿಯಲು ಹೋದ ಯುವಕನ ಬರ್ಬರ ಕೊ*ಲೆ..! ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು : ಫ್ರೆಂಡ್ಸ್ ಜತೆ ಟೀ ಕುಡಿಯಲು ಹೋದ ಯುವಕನ ಬರ್ಬರ ಕೊ*ಲೆ..! ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Prathinidhi News
Last updated: November 26, 2025 11:46 am
Prathinidhi News
Published November 26, 2025
Share
SHARE

ಮೈಸೂರು, ನವೆಂಬರ್‌ 26, 2025 : ಮೈಸೂರು ನಗರದ ಶಾಂತಿ ನಗರದಲ್ಲಿ ಬುಧವಾರ ಮುಂಜಾನೆ ಭೀಕರ ಕೊಲೆ ನಡೆದಿದೆ. ಕೇವಲ 19 ವರ್ಷದ ಯುವಕ ಸಯ್ಯದ್ ಸೂಫಿಯಾನ್ ಎಂಬಾತನನ್ನು ಆತನ ಸ್ನೇಹಿತರೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಇಡೀ ಘಟನೆಯ ಭೀಕರ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯು ಬುಧವಾರ ಮುಂಜಾನೆ ಸುಮಾರು 5.40ರ ಸುಮಾರಿಗೆ ಮೈಸೂರಿನ ಶಾಂತಿ ನಗರದ ರಸ್ತೆಯಲ್ಲಿ ನಡೆದಿದೆ. ಕೊಲೆಯಾದ ಯುವಕ ಸಯ್ಯದ್ ಸೂಫಿಯಾನ್ ಮತ್ತು ಕೊಲೆ ಮಾಡಿದ ಇಬ್ಬರು ಆರೋಪಿಗಳು ಮದ್ಯವ್ಯಸನಿಗಳಾಗಿದ್ದರು ಎಂದು ತಿಳಿದುಬಂದಿದೆ. ಪರಸ್ಪರರ ನಡುವಿನ ವೈಯಕ್ತಿಕ ಕಲಹವೇ ಕೊಲೆಗೆ ಕಾರಣವಾಗಿರುವ ಸಾಧ್ಯತೆ ಇದೆ. ಸೂಫಿಯಾನ್ ತನ್ನ ಸ್ನೇಹಿತನೊಂದಿಗೆ ಟೀ ಕುಡಿಯಲು ಹೋದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಆರೋಪಿಗಳು ಸೂಫಿಯಾನ್‌ನನ್ನು ರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಹೋಗಿ, ಚಾಕುವಿನಿಂದ ಎದೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಸೂಫಿಯಾನ್ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕಾಗಿ ಪರಿಪರಿಯಾಗಿ ಬೇಡಿಕೊಂಡಿದ್ದಾನೆ. ಆದರೆ, ಈ ಭೀಕರ ದೃಶ್ಯವನ್ನು ಕಂಡ ಸ್ಥಳೀಯರು ಮತ್ತು ರಸ್ತೆಯಲ್ಲಿ ಓಡಾಡುತ್ತಿದ್ದ ಯಾವೊಬ್ಬ ನಾಗರಿಕರೂ ಸಹಾಯಕ್ಕೆ ಧಾವಿಸಿಲ್ಲ. ಪರಿಣಾಮವಾಗಿ, ರಸ್ತೆಯಲ್ಲೇ ಯುವಕ ನರಳಾಡಿ ಒದ್ದಾಡಿ ಪ್ರಾಣ ಬಿಟ್ಟಿದ್ದಾನೆ. ಕೊಲೆ ನಡೆಯುವಾಗ ಸಹಾಯಕ್ಕೆ ಬಾರದ ಜನರ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೈದ ಇಬ್ಬರು ಸ್ನೇಹಿತರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಭೀಕರ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಸರ್ಕಾರಿ ಜಾಗ ಖಾಸಗಿಯವರ ಪಾಲು ಮಾಡಬೇಡಿ: ಮೈಸೂರಿನ ಇಟ್ಟಿಗೆಗೂಡು ನಿವಾಸಿಗಳ ಪ್ರತಿಭಟನೆ

January 2, 2026
ಮುಖಪುಟಮೈಸೂರು ನಗರ

ಮೈಸೂರು : ಬೋಗಾದಿ ಬಳಿ 4 ವರ್ಷದ ಹೆಣ್ಣು ಚಿರತೆ ಸೆರೆ..! ಸಾರ್ವಜನಿಕರ ನಿಟ್ಟುಸಿರು

December 29, 2025
ಬೆಂಗಳೂರುಮುಖಪುಟರಾಜಕೀಯ

17ನೇ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ ; “ಟಗರು” ಆಯವ್ಯಯಕ್ಕೆ ಹೇಗಿದೆ ತಯಾರಿ..?

February 6, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ; ‘ಸಂವಿಧಾನಕ್ಕೆ ಮೋಸ ಮಾಡಿದ್ದು ಕಾಂಗ್ರೆಸ್’

November 25, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?