ಶ್ರೀರಂಗಪಟ್ಟಣ, ಏಪ್ರಿಲ್ 11, 2026 : ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಹೋಟೆಲ್ ಮಯೂರ ರಿವರ್ ವ್ಯೂನಲ್ಲಿ ಭಾರಿ ಅವ್ಯವಹಾರ ಹಾಗೂ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಹೋಟೆಲ್‌ನ ಅಡುಗೆ ಕೋಣೆಯು ಅತ್ಯಂತ ಅಶುಚಿಯಿಂದ ಕೂಡಿದ್ದು, ದುರ್ವಾಸನೆ ಬೀರುತ್ತಿದೆ ಎಂಬ ದೂರುಗಳು ವ್ಯಕ್ತವಾಗಿವೆ.
ಇನ್ನು ಆಘಾತಕಾರಿ ಅಂಶವೆಂದರೆ, ಹೋಟೆಲ್ ಸಿಬ್ಬಂದಿಗಳು ಅಡುಗೆ ತಯಾರಿಸಲು ಶೌಚಾಲಯದ ನೀರನ್ನು ಬಳಕೆ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಪ್ರವಾಸಿಗರ ಆರೋಗ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ಐತಿಹಾಸಿಕ ಶ್ರೀರಂಗಪಟ್ಟಣಕ್ಕೆ ಬರುವ ಸಾವಿರಾರು ಪ್ರವಾಸಿಗರು ನಂಬಿ ಬರುವ ಸರ್ಕಾರಿ ಹೋಟೆಲ್‌ನಲ್ಲಿ ಇಂತಹ ಅವ್ಯವಸ್ಥೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರವಾಸೋದ್ಯಮ ಇಲಾಖೆಯು ಈ ಕೂಡಲೇ ಎಚ್ಚೆತ್ತುಕೊಂಡು ಹೋಟೆಲ್‌ನ ಸ್ವಚ್ಛತೆ ಮತ್ತು ಗುಣಮಟ್ಟದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರವಾಸಿಗರು ಆಗ್ರಹಿಸಿದ್ದಾರೆ.
