ಮೈಸೂರು, ಮಾರ್ಚ್ 2, 2026 : ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಇಂದು ಮೈಸೂರು ಜಿಲ್ಲಾ ಪಂಚಾಯತ್ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ “ಅಕ್ಕ ಕೆಫೆ”ಯನ್ನು ಲೋಕಾರ್ಪಣೆ ಮಾಡಿದರು.

ರಾಷ್ಟ್ರೀಯ ಜೀವನೋಪಾಯ ಮಿಷನ್ ಯೋಜನೆಯಡಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಈ ಕೆಫೆಯನ್ನು ಪ್ರಾರಂಭಿಸಿದ್ದು, ಸಚಿವರು ಇದರ ಉದ್ಘಾಟನೆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್ ಮತ್ತು ಡಿ. ರವಿಶಂಕರ್ ಭಾಗವಹಿಸಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಜೊತೆಗೆ, ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ವಿಷ್ಣುವರ್ಧನ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
