ರಾಮನಗರ/ತುಮಕೂರು: ಕೆಎಸ್ಆರ್ಟಿಸಿ ಬಸ್ಸಿನ ಸ್ಟೇರಿಂಗ್ ಕಟ್ ಆಗಿದ್ದು, ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಲ್ಲಿದ್ದ ತಂದೆ- ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕೋಟಮಾರನಹಳ್ಳಿ ಗ್ರಾಮದ ತಂದೆ ಸಿದ್ದಯ್ಯ (65), ಮಗ ಅರುಣ್ (28) ಮೃತ ದುರ್ದೈವಿಗಳು. ತಿಟ್ಟಮಾರನಹಳ್ಳಿಯ ರಾಮಮ್ಮನ ಕೆರೆ ಏರಿ ಮೇಲೆ ಬರುವಾಗ ಈ ಅಪಘಾತ ಸಂಭವಿಸಿದೆ. ತಡೆಗೋಡೆ ಇದ್ದ ಪರಿಣಾಮ 30 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
