PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸುರಂಗದಲ್ಲಿ ಸಿಲುಕಿರುವ 41 ಜನರ ನೆರವಿಗೆ ಪೈಪ್‌: ಘನಾಹಾರ ಪೂರೈಕೆ, ರಕ್ಷಣಾ ಕಾರ್ಯಕ್ಕೆ ಮೊದಲ ಯಶಸ್ಸು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಸುರಂಗದಲ್ಲಿ ಸಿಲುಕಿರುವ 41 ಜನರ ನೆರವಿಗೆ ಪೈಪ್‌: ಘನಾಹಾರ ಪೂರೈಕೆ, ರಕ್ಷಣಾ ಕಾರ್ಯಕ್ಕೆ ಮೊದಲ ಯಶಸ್ಸು
ಜಿಲ್ಲೆ

ಸುರಂಗದಲ್ಲಿ ಸಿಲುಕಿರುವ 41 ಜನರ ನೆರವಿಗೆ ಪೈಪ್‌: ಘನಾಹಾರ ಪೂರೈಕೆ, ರಕ್ಷಣಾ ಕಾರ್ಯಕ್ಕೆ ಮೊದಲ ಯಶಸ್ಸು

Prathinidhi News
Last updated: November 21, 2023 10:31 am
Prathinidhi News
Published November 21, 2023
Share
Rescue workers stand at an entrance of the under construction road tunnel, days after it collapsed in the Uttarkashi district of India's Uttarakhand state on November 18, 2023. Indian rescuers said on November 18, they had paused efforts to reach 41 men trapped in a collapsed road tunnel after a cracking sound created a "panic situation" over the possibility of a further cave-in. (Photo by AFP)
SHARE

ಉತ್ತರಕಾಶಿ ಸುರಂಗ ಕುಸಿದ ಘಟನೆಗೆ ಸಂಬಂಧಿಸಿದಂತೆ 9ನೇ ದಿನ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದ್ದು, ದೊಡ್ಡ ‘ಜೀವರಕ್ಷಕ ಪೈಪ್‌’ ಅಳವಡಿಸುವ ಕೆಲಸ ಯಶಸ್ವಿಯಾಗಿದೆ. ಈ ಮೂಲಕ ಸಿಕ್ಕಿಬಿದ್ದ 41 ಕಾರ್ಮಿಕರಿಗೆ 9 ದಿನದಲ್ಲಿ ಇದೇ ಮೊದಲ ಬಾರಿ ಘನ ಆಹಾರ ಪೂರೈಸಲು ಸಾಧ್ಯವಾಗಲಿದೆ.

ಈವರೆಗೂ ಕೇವಲ ಸಣ್ಣ ಪೈಪ್‌ ಮೂಲಕ ಕಾರ್ಮಿಕರಿಗೆ ದ್ರವಾಹಾರ, ಒಣಹಣ್ಣು, ನೀರು, ಔಷಧ ನೀಡಲಾಗುತ್ತಿತ್ತು. ಆದರೆ ಈಗ ಸುರಂಗದ ಮೂಲಕ 53 ಮೀಟರ್ ಒಳಗೆ 6 ಇಂಚಿನ ‘ಲೈಫ್ ಲೈನ್ ಪೈಪ್’ ಅಳವಡಿಸಲಾಗಿದೆ. ಇವುಗಳ ಮೂಲಕ ರೊಟ್ಟಿ, ಪಲ್ಯದಂಥ ಘನಾಹಾರ ನೀಡಬಹುದು. ಜೊತೆಗೆ ಈ ಮೊದಲಿನಂತೆ ಔಷಧ,  ನೀರು, ದ್ರವಾಹಾರ ಕೊಡಬಹುದು. ಅಲ್ಲದೆ, ಕ್ಯಾಮರಾದಂಥ ಉಪಕರಣವನ್ನು ಅದರಲ್ಲಿ ಕಳಿಸಿ ಕಾರ್ಮಿಕರ ಸ್ಥಿತಿಗತಿ ಅರಿಯಬಹುದು. ಪೈಪ್‌ ಮೂಲಕ ಜೋರಾಗಿ ಮಾತನಾಡಿ, ಕಾರ್ಮಿಕರ ಜತೆ ನೈಜ ಸಂವಹನ ಸಾಧಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿದೇಶಿ ತಜ್ಞ ಭೇಟಿ:
ಚಾರ್‌ಧಾಮ್‌ ಯಾತ್ರೆಗೆ ಸರ್ವಋತು ರಸ್ತೆ ನಿರ್ಮಿಸುವ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಭೂಕುಸಿತ ಉಂಟಾಗಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ವಿದೇಶಿ ತಜ್ಞ ಅರ್ನಾಲ್ಡ್‌ ಡಿಕ್ಸ್‌ ಆಗಮಿಸಿದ್ದಾರೆ. ಕಾರ್ಮಿಕರನ್ನು ಎಷ್ಟು ವೇಗವಾಗಿ ರಕ್ಷಿಸುತ್ತೇವೆ ಎಂಬುದಕ್ಕಿಂತ ಎಷ್ಟು ಸುರಕ್ಷಿತವಾಗಿ ರಕ್ಷಿಸುತ್ತೇವೆ ಎಂಬುದು ಮುಖ್ಯ. ಪರ್ವತದ ಎತ್ತರದಿಂದ ಕೊರೆಯುವ ಮೂಲಕ ಅವರ ರಕ್ಷಣಾ ಕಾರ್ಯ ಆರಂಭಿಸಲು ಸದ್ಯಕ್ಕೆ ಯೋಜಿಸಲಾಗಿದೆ’ ಎಂದಿದ್ದಾರೆ.

ಇದರ ನಡುವೆ, ಸುರಂಗದಲ್ಲಿ ರಂಧ್ರ ಕೊರೆವ ಇನ್ನೊಂದು ಯಂತ್ರವನ್ನು ತರಿಸಿಕೊಳ್ಳಲಾಗುತ್ತಿದೆ. ಆದರೆ ಅದು ತುಂಬಾ ಭಾರ ಇರುವ ಕಾರಣ ವಿಮಾನದಲ್ಲಿ ತರಲು ಆಗುತ್ತಿಲ್ಲ. ಬದಲಾಗಿ ರೈಲಿನಲ್ಲಿ ತರಲಾಗುತ್ತಿದೆ. ಅಲ್ಲದೆ, ರೈಲು ನಿಲ್ದಾಣದಿಂದ ಘಟನಾ ಸ್ಥಳಕ್ಕೆ ಅದನ್ನು ತರಲು ಗುಡ್ಡ ಅಗೆದು ಅಗಲವಾದ ರಸ್ತೆ ನಿರ್ಮಿಸಲಾಗುತ್ತಿದೆ.

- ಜಾಹೀರಾತು -

ಇನ್ನೊಂದು ಕಡೆ ಪ್ರಧಾನಿ ನರೇಂದ್ರ ಮೋದಿ ಅವರು, ಕಾರ್ಮಿಕರ ಮಾನಸಿಕ ಸ್ಥೈರ್ಯ ಕಾಪಾಡಬೇಕೆಂದು ಸೂಚಿಸಿರುವ ಹಿನ್ನೆಲೆಯಲ್ಲಿ ಕೆಲವು ಮನೋವೈದ್ಯರನ್ನು ಸುರಂಗ ಸ್ಥಳಕ್ಕೆ ಕರೆಸಿಕೊಂಡು ಕಾರ್ಮಿಕರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಾಗುತ್ತಿದೆ. ಈ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಸುರಂಗದಡಿ ಸಿಲುಕಿರುವ 41 ಕಾರ್ಮಿಕರ ಕುಟುಂಬದ ವಸತಿ, ಆಹಾರ ಮತ್ತು ಪ್ರಯಾಣ ವೆಚ್ಚವನ್ನು ಭರಿಸುವುದಾಗಿ ಘೋಷಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಹೆಚ್ ಡಿ ಕುಮಾರಸ್ವಾಮಿ ರಾಜ್ಯಮಟ್ಟದ ನಾಯಕರು: ನಿಖಿಲ್ ಕುಮಾರಸ್ವಾಮಿ

January 24, 2024
ಚುನಾವಣೆಜಿಲ್ಲೆಮುಖಪುಟಮೈಸೂರು ನಗರರಾಜಕೀಯ

PODCAST : ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ…!

April 3, 2024
ಜಿಲ್ಲೆಮುಖಪುಟರಾಜಕೀಯ

ಸಿಎಂ ಸಿದ್ದರಾಮಯ್ಯ ಅವರನ್ನ ಯಾರಾದ್ರು ಮುಟ್ಟೋಕೆ ಆಗುತ್ತಾ? : ಸಚಿವ ವಿ ಸೋಮಣ್ಣ ವ್ಯಂಗ್ಯ

November 14, 2024
ಜಿಲ್ಲೆ

ನೆಲಮಂಗಲ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಕ್ಲೀನರ್: ಆರೋಪಿ ಅರೆಸ್ಟ್

January 12, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?