ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9,11 ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ 5,8,9,11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನರಹಿತ ಶಾಲೆಗಳ ಸಂಘ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ 5,8,9,11 ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.