PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜಾತಿಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ತೀವ್ರ ವಿರೋಧ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಜಾತಿಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ತೀವ್ರ ವಿರೋಧ..!
ಮುಖಪುಟಮೈಸೂರು ನಗರರಾಜಕೀಯ

ಜಾತಿಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ತೀವ್ರ ವಿರೋಧ..!

Prathinidhi News
Last updated: April 16, 2025 4:19 pm
Prathinidhi News
Published April 16, 2025
Share
SHARE

ಮೈಸೂರು , ಏಪ್ರಿಲ್‌ 16, 2025 : ಜಾತಿಗಣತಿ ವರದಿ ಬಿಡುಗಡೆ ವಿಚಾರ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಇಂದು ಮೈಸೂರಿನಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಜಾತಿಗಣತಿ ವರದಿ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಯಿತು. 


ಮೈಸೂರು ಜಿಲ್ಲಾ ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಮರಿಸ್ವಾಮಿ ನೇತೃತ್ವದಲ್ಲಿ ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಜಾತಿಗಣತಿ ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದರು. 2015ರಲ್ಲಿ ಅಂದಿನ ಸರ್ಕಾರ ಜಾತಿಗಣತಿಯನ್ನು ವೈಜ್ಞಾನಿಕವಾಗಿ ನಡೆಸಿಲ್ಲ.ಕೇವಲ ಯಾವುದೋ ಒಂದು ಎಸಿ ರೂಮಿನಲ್ಲಿ ಕುಳಿತು ತಯಾರಿಸಿರುವ ವರದಿ ಇದಾಗಿದೆ.1987ರ ಚಿನ್ನಪ್ಪರೆಡ್ಡಿ ಆಯೋಗದ ಪ್ರಕಾರ ಅಂದೇ ಒಕ್ಕಲಿಗರು ಸುಮಾರು 51 ಲಕ್ಷ ಇದಾರೆ ಎಂದು ವರದಿ ಹೇಳಿದೆ.ಅದಾದ ಬಳಿಕ 1991ರ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸುಮಾರು 55 ಲಕ್ಷ ಇದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ.ಪ್ರಸ್ತುತ ರಾಜ್ಯದಲ್ಲಿ ಒಕ್ಕಲಿಗರ ಸಂಖ್ಯೆ ಕೇವಲ 61 ಲಕ್ಷ ಎಂದು ಅಂಕಿ ಅಂಶ ಕೊಟ್ಟಿದ್ದಾರೆ.ಹಾಗಾದರೆ ಒಕ್ಕಲಿಗರ ಸಂಖ್ಯೆ 34 ವರ್ಷಗಳಲ್ಲಿ ಕೇವಲ ಐದಾರು ಲಕ್ಷ ಮಾತ್ರ ಹೆಚ್ಚಳವಾಗಿದೆಯಾ.?ಸರಿಯಾಗಿ ಸಮೀಕ್ಷೆ ನಡೆಸಿದರೆ 90 ಲಕ್ಷದಿಂದ 1 ಕೋಟಿಯಷ್ಟು ‌ಒಕ್ಕಲಿಗರ ಜನಸಂಖ್ಯೆ ಇದೆ.ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಅಂಕಿ ಅಂಶಗಳನ್ನು ನೀಡಿ ಒಕ್ಕಲಿಗರನ್ನು ಹತ್ತಿಕ್ಕುವ, ತುಳಿಯುವ ಕೆಲಸ ಮಾಡುತ್ತಿದೆ.ಒಕ್ಕಲಿಗ, ಲಿಂಗಾಯತ ಸಮುದಾಯಗಳನ್ನು ರಾಜಕೀಯವಾಗಿ ತುಳಿಯುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.ಜಾತಿಗಣತಿಗೆ ನಮ್ಮ ವಿರೋಧ ಇಲ್ಲ, ಆದರೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಯಲಿ.ಈಗ ಬಿಡುಗಡೆಗೆ ಸಿದ್ದವಾಗಿರುವ ಜಾತಿ ಗಣತಿ ವರದಿಯನ್ನು ತೀವ್ರವಾಗಿ ವಿರೋಧಿಸುತ್ತೇವೆ.ಈ ಬಗ್ಗೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು.ಇಲ್ಲದಿದ್ದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯ್ತು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ‌ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ ಮರಿಸ್ವಾಮಿ, ಉಪಾಧ್ಯಕ್ಷ ಆರ್ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚೇತನ್, ನಿರ್ದೇಶಕರಾದ ಎಂ ಕೆ ಮಿರ್ಲೇ ಶ್ರೀನಿವಾಸ ಗೌಡ, ಸುಶೀಲಾ ನಂಜಪ್ಪ, ರವಿ, ಕೆ ಪಿ ನಾಗಣ್ಣ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಂ‌ ಬಿ ಮಂಜುಗೌಡ ಮೊದಲಾದವರು ಭಾಗಿಯಾಗಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಜಿಲ್ಲೆಮುಖಪುಟಮೈಸೂರು ನಗರ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗಗಳನ್ನು ಮರೆತಿದ್ದಾರೆ‌-ಬಿವೈ ವಿಜಯೇಂದ್ರ

April 21, 2024
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಕಾಂಗ್ರೆಸ್ ಸೇರ್ಪಡೆಯಾದ ‘ಸೈನಿಕ’..! ಪಕ್ಷಕ್ಕೆ ವೆಲ್ ಕಮ್ ಮಾಡಿದ ಡಿಸಿಎಂ ಡಿಕೆಶಿ

October 23, 2024
ದೇಶ-ವಿದೇಶಮುಖಪುಟರಾಜಕೀಯ

ಪೋಖ್ರಾನ್ ಫೈರಿಂಗ್ ರೇಂಜ್‌ ನಲ್ಲಿ ಭಾರತ್ ಶಕ್ತಿ ಪ್ರದರ್ಶನ ವೀಕ್ಷಿಸಿದ ಮೋದಿ

March 12, 2024
ಬೆಂಗಳೂರುಮುಖಪುಟಸಿನಿಮಾ

ಪುನೀತ್ ರಾಜ್ ಕುಮಾರ್ ಗೆ ಫ್ಯಾನ್ಸ್ ‘ಅಪ್ಪು’ಗೆ..! ಪವರ್ ಸ್ಟಾರ್ ಗೆ ಜೈ ಎಂದ ಅಭಿಮಾನಿ ದೇವ್ರುಗಳು..!

March 14, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?