PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಯದುವೀರ್‌ ಒಡೆಯರ್‌ ಪ್ರಯತ್ನಕ್ಕೆ ಯಶಸ್ಸು: ತಂಬಾಕು ಬೆಳೆಗಾರರಿಗೆ ಸಿಕ್ಕಿತು ಹೆಚ್ಚುವರಿ ಆರ್ಥಿಕ ನೆರವು!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಯದುವೀರ್‌ ಒಡೆಯರ್‌ ಪ್ರಯತ್ನಕ್ಕೆ ಯಶಸ್ಸು: ತಂಬಾಕು ಬೆಳೆಗಾರರಿಗೆ ಸಿಕ್ಕಿತು ಹೆಚ್ಚುವರಿ ಆರ್ಥಿಕ ನೆರವು!
ಮುಖಪುಟಮೈಸೂರು ನಗರ

ಯದುವೀರ್‌ ಒಡೆಯರ್‌ ಪ್ರಯತ್ನಕ್ಕೆ ಯಶಸ್ಸು: ತಂಬಾಕು ಬೆಳೆಗಾರರಿಗೆ ಸಿಕ್ಕಿತು ಹೆಚ್ಚುವರಿ ಆರ್ಥಿಕ ನೆರವು!

Prathinidhi News
Last updated: July 23, 2026 3:37 pm
Prathinidhi News
Published July 23, 2026
Share
SHARE

ಮೈಸೂರು (ಜುಲೈ 23, 2026): ಪ್ರಾಕೃತಿಕ ವಿಕೋಪಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಎಫ್‌ಸಿವಿ (FCV) ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ತಂಬಾಕು ಮಂಡಳಿಯ ಮೂಲಕ ನೀಡಲಾಗುವ ಅನುದಾನ ಹಾಗೂ ಬಡ್ಡಿರಹಿತ ಸಾಲದ ಮೊತ್ತವನ್ನು ₹50,000 ದಿಂದ ₹75,000 ಕ್ಕೆ ಹೆಚ್ಚಿಸಿದೆ. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಿರಂತರ ಶ್ರಮ ಮತ್ತು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯಕ್ಕೆ ಅವರು ಸಲ್ಲಿಸಿದ ಪರಿಣಾಮಕಾರಿ ಮನವಿಗಳಿಗೆ ಈ ಮಹತ್ವದ ಫಲ ಸಿಕ್ಕಿದೆ.

₹50,000 ದಿಂದ ₹75,000ಕ್ಕೆ ಆರ್ಥಿಕ ನೆರವು ಏರಿಕೆ: ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಅನುಭವಿಸಿರುವ ರೈತರ ಸಂಕಷ್ಟವನ್ನು ಮನಗಂಡು, ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಸರ್ಕಾರ ಮತ್ತು ತಂಬಾಕು ಮಂಡಳಿಯ ಮೇಲೆ ಒತ್ತಡ ತಂದಿದ್ದರು. ಇದರ ಪರಿಣಾಮವಾಗಿ ಪರಿಷ್ಕೃತ ಮಾರ್ಗಸೂಚಿಗಳಂತೆ ಬಡ್ಡಿರಹಿತ ಸಾಲ ಮತ್ತು ಅನುದಾನದ ಮೊತ್ತವನ್ನು ಹೆಚ್ಚಿಸಲಾಗಿದ್ದು, ಇತರೆ ನೆರವಿನ ವಿಭಾಗಗಳಲ್ಲೂ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗಿದೆ.

ಈ ನಿರ್ಧಾರಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹಾಗೂ ತಂಬಾಕು ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಯದುವೀರ್ ಒಡೆಯರ್, “ಈ ಸಕಾಲಿಕ ಸಹಾಯವು ಸಂಕಷ್ಟದಲ್ಲಿರುವ ಬೆಳೆಗಾರರ ಜೀವನೋಪಾಯವನ್ನು ಪುನರುಜ್ಜೀವನಗೊಳಿಸಲು ಮತ್ತು ಅವರಿಗೆ ಆರ್ಥಿಕ ಬಲ ನೀಡಲು ಸಹಕಾರಿಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಂಧ್ರಪ್ರದೇಶ ಮಾದರಿಯಲ್ಲೇ ಕರ್ನಾಟಕಕ್ಕೂ ಬೆಂಬಲ ಬೆಲೆಗೆ ಪತ್ರ!: ಬಡ್ಡಿರಹಿತ ಸಾಲದ ಮೊತ್ತ ಹೆಚ್ಚಳವನ್ನು ಸ್ವಾಗತಿಸಿದ ಯದುವೀರ್ ಒಡೆಯರ್, ಕರ್ನಾಟಕದ ತಂಬಾಕು ಬೆಳೆಗಾರರಿಗೂ ನ್ಯಾಯಸಮ್ಮತ ಬೆಂಬಲ ಬೆಲೆ ಸಿಗಬೇಕೆಂದು ಪಟ್ಟು ಹಿಡಿದಿದ್ದಾರೆ.

- ಜಾಹೀರಾತು -

ಈ ಸಂಬಂಧ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿರುವ ಅವರು, “ಆಂಧ್ರಪ್ರದೇಶದ ತಂಬಾಕು ಬೆಳೆಗಾರರಿಗೆ ನೀಡಿರುವ ಮಾನ್ಯತೆಯಂತೆಯೇ ಕರ್ನಾಟಕದ ರೈತರಿಗೂ ನ್ಯಾಯಯುತ ಹಾಗೂ ಲಾಭದಾಯಕ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು. ನಮ್ಮ ರಾಜ್ಯದ ರೈತರೂ ಸಹ ಸಮಾನ ಮಾನ್ಯತೆ ಮತ್ತು ರಕ್ಷಣೆಗೆ ಸಂಪೂರ್ಣ ಅರ್ಹರಾಗಿದ್ದಾರೆ” ಎಂದು ಒತ್ತಾಯಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಬಿಜೆಪಿ ಟಿಕೆಟ್ ಸಮರ: ಪ್ರತಾಪ್ ಸಿಂಹ ವಿರುದ್ಧ ಗುಡುಗಿದ ಎಲ್. ನಾಗೇಂದ್ರ

January 7, 2026
ಮುಖಪುಟಮೈಸೂರು ನಗರರಾಜಕೀಯ

ನಾನೇ ಪೂರ್ಣಾವಧಿ ಸಿಎಂ; ಹೈಕಮಾಂಡ್ ಮೇಲೆ ನನಗಿದೆ ಅಚಲ ವಿಶ್ವಾಸ -ಸಿಎಂ ಸಿದ್ದರಾಮಯ್ಯ

January 6, 2026
ಮಂಡ್ಯಮುಖಪುಟರಾಜಕೀಯ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮದ್ದೂರಿನಲ್ಲಿ ಅದ್ದೂರಿ ಸ್ವಾಗತ, ಹುಟ್ಟುಹಬ್ಬ ಆಚರಣೆ!

December 16, 2025
ಬೆಂಗಳೂರುಮುಖಪುಟರಾಜಕೀಯ

ಕಾಂಗ್ರೆಸ್ ಸರ್ಕಾರ ಗುಂಡಿಗಳ ಮತ್ತು ಪಾಪರ್ ಸರ್ಕಾರವಾಗಿದೆ, ಜನರ ಶಾಪ ತಟ್ಟಲಿದೆ ; ವಿರೋಧ ಪಕ್ಷದ ನಾಯಕ ಆರ್.ಅಶೋಕ್

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?