PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಡಿ ರೂಪಾ-ರೋಹಿಣಿ ಸಿಂಧೂರಿ ಕಲಹ: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಡಿ ರೂಪಾ-ರೋಹಿಣಿ ಸಿಂಧೂರಿ ಕಲಹ: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ಜಿಲ್ಲೆ

ಡಿ ರೂಪಾ-ರೋಹಿಣಿ ಸಿಂಧೂರಿ ಕಲಹ: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

Prathinidhi News
Last updated: January 12, 2024 4:44 pm
Prathinidhi News
Published January 12, 2024
Share
SHARE

ಐಪಿಎಸ್​ ಅಧಿಕಾರಿ ಡಿ.ರೂಪಾ (D Roopa) ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ(Rohini Sindhuri)  ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ (supreme court ) ಮೆಟ್ಟಿಲೇರಿದ್ದು, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ. ಆದ್ರೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್​​ ತೆಗೆದು ಹಾಕಬಹುದು. ಆದರೆ ಘಟನೆಯಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ. ಇದಕ್ಕಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಬೇಕು ಎಂದು ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡಿಸಿದರು. ಆದ್ರೆ, ಇದಕ್ಕೆ ತೀವ್ರ ಆಕ್ಷೇಪವ್ಯಕ್ತಪಡಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಅವಹೇಳನಕಾರಿ ಮಾತನಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳ ಎದುರು ಹೇಳಿದ್ದಾರೆ ಎಂದು ಪ್ರತಿವಾದ ಮಂಡಿಸಿದರು. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಂಧೂರಿ ಪರ ವಕೀಲರು, ಹೌದು ಬುದ್ಧಿ ಭ್ರಮಣೆಯಾದವರು ಈ ರೀತಿ ಪೊಸ್ಟ್ ಮಾಡ್ತಾರೆ ಎಂದಿದ್ದೆ. ಡಿ.ರೂಪಾಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಹೇಳಿಲ್ಲ ಎಂದರು.

ವಾದ ಪ್ರತಿವಾದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿ ಎ.ಎಸ್.ಓಕಾ, ನೀವು ಒಂದು ನಿರ್ಧಾರಕ್ಕೆ ಬರಬೇಕು, ಇಬ್ಬರಿಗೂ ಉಜ್ವಲ ಭವಿಷ್ಯವಿದೆ ಎಂದು ಸಲಹೆ ನೀಡಿದರು. ಬಳಿಕ ರೋಹಿಣಿ ಸಿಂಧೂರಿ ಪರ ವಕೀಲ ಪ್ರತಿಕ್ರಿಯಿಸಿ, ಉಜ್ವಲ ಭವಿಷ್ಯ ಇರಬಹುದು, ಆದರೆ ಜನರು ಬೇರೆ ರೀತಿ ನೋಡುತ್ತಿದ್ದಾರೆ. ನಾನು ಮೌನವಾಗಿ ಇರಲು ಸಾಧ್ಯವಿಲ್ಲ ಎಂದು ಹೇಳಿದರು.

ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16ಕ್ಕೆ ಮುಂದೂಡಿದರು. ಆದ್ರೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸೂಚನೆ ನೀಡಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಟಿ. ನರಸೀಪುರ: ತಡರಾತ್ರಿ ಸುರಿದ ಮಳೆಗೆ ಕುರುಬೂರು ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತ

October 11, 2025
ಜಿಲ್ಲೆ

ಜ.23ಕ್ಕೆ 545 ಎಸ್‌ಐ ಹುದ್ದೆಗೆ ಮರುಪರೀಕ್ಷೆ

January 9, 2024
ಜಿಲ್ಲೆಮುಖಪುಟಸನ್ನಿಧಾನ

ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ಹುಂಡಿ ಎಣಿಕೆ : 22 ದಿನಗಳಲ್ಲಿ ಭಕ್ತರಿಂದ ಕೋಟಿ ಕೋಟಿ ಹಣ ಕಾಣಿಕೆ ಸಲ್ಲಿಕೆ

August 21, 2025
ಜಿಲ್ಲೆ

ನಾಡಿದ್ದು ಮೊದಲ ಕಂಬಳಕ್ಕೆ ಬೆಂಗಳೂರು ಸಜ್ಜು: ಸುದೀಪ್, ಶಿವಣ್ಣ, ಉಪ್ಪಿ ಭಾಗಿ

November 23, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?