PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನವದೆಹಲಿ > ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ
ನವದೆಹಲಿಮುಖಪುಟ

ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

Prathinidhi News
Last updated: March 21, 2024 1:17 pm
Prathinidhi News
Published March 21, 2024
Share
SHARE

ದೆಹಲಿ : ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಇಂದು ಸುಪ್ರೀಂ ಕೋರ್ಟ್ ಹೇಳಿದೆ. ಲೋಕಸಭೆ ಚುನಾವಣೆ ಘೋಷಣೆಯಾಗಿದೆ. ಈ ಸಮಯದಲ್ಲಿ ನಾವು ಈ ರೀತಿ ಮಾಡಿದರೆ ಅವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಎಂದು ಸುಪ್ರೀಂ ಹೇಳಿದೆ. ಆಯ್ಕೆ ಸಮಿತಿಯಲ್ಲಿ ಬದಲಾವಣೆಗಳನ್ನು ಮಾಡಿದ ನಂತರ ಅಂದರೆ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಗಳನ್ನು ಕೈಬಿಡಲಾಗಿದೆ. ಇನ್ನು ಈಗಾಗಲೇ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಚುನಾವಣಾ ಆಯೋಗವು ಕಾರ್ಯಾಂಗ ವ್ಯಾಪ್ತಿಯಲ್ಲಿ ಬರುತ್ತದೆ. ಹಾಗಾಗಿ ನಾವು ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಜಾರಿಗೆ ತಂದಿರುವ ಕಾನೂನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದು ಅರ್ಜಿದಾರರಿಗೆ ಹೇಳಿದೆ. ನೇಮಕಗೊಂಡಿರುವವರ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ಹೇಳಿದೆ. ಈ ಸಮಯಲ್ಲಿ ನಾವು ತಡೆ ನೀಡಿದರೆ ಅದು ಚುನಾವಣೆ ಮೇಲೆ ಪರಿಣಾಮ ಉಂಟು ಮಾಡುತ್ತದೆ ಎಂದು ಹೇಳಿದೆ.

ಇನ್ನು ಅರ್ಜಿದಾರ ಜಯಾ ಠಾಕೂರ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ವಿಕಾಸ್ ಸಿಂಗ್, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕಾಯಿದೆ ಪ್ರಕಾರ, 2023ರಲ್ಲಿ ಚುನಾವಣಾ ಆಯುಕ್ತ ನೇಮಕಾತಿಯಲ್ಲಿ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

- ಜಾಹೀರಾತು -

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪರವಾಗಿ ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಚುನಾವಣಾ ಆಯೋಗ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲುತ್ತದೆ. ಇದರಲ್ಲಿ ರಾಜಕೀಯ ಮತ್ತು ಕಾರ್ಯಾಂಗದ ಹಸ್ತಕ್ಷೇಪದಿಂದ ಪ್ರತ್ಯೇಕಿಸಬೇಕು ಎಂದು ಹೇಳಿದ್ದಾರೆ. ಮಾಜಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಂಧು ಅವರನ್ನು ಗುರುವಾರ ಇಸಿಗಳಾಗಿ ನೇಮಕ ಮಾಡಿದ್ದರಿಂದ ವಿಚಾರಣೆ ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಅವರನ್ನು ಆಯ್ಕೆ ಮಾಡಲಾಗಿದೆ.

ಫೆಬ್ರವರಿ 14 ರಂದು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ನಂತರ ಚುನಾವಣಾ ಆಯೋದಲ್ಲಿ ಎರಡು ಹುದ್ದೆಗಳು ಖಾಲಿಯಾಗಿವೆ. ಎನ್‌ಜಿಒ ಸಿಂಧುತ್ವವನ್ನು ಪ್ರಶ್ನಿಸಿದೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯಿದೆ, 2023 ರ ಸೆಕ್ಷನ್ 7 ರ ಕಾರ್ಯಾಚರಣೆಗೆ ತಡೆ ಕೋರಿತ್ತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೀಡೆಮುಖಪುಟ

ಸಚಿನ್‌ ಅಲ್ಲ.. ಕ್ರಿಕೆಟ್‌ನಲ್ಲಿ 199 ಶತಕ ದಾಖಲೆಗಳನ್ನು ಹೊಂದಿದ ಸ್ಟಾರ್‌ ಬ್ಯಾಟ್ಸ್‌ಮನ್ ಈತ!

March 3, 2024
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ- ಉದಯಗಿರಿಯಲ್ಲಿ ಘಟನೆ

November 14, 2024
ಮುಖಪುಟಮೈಸೂರು ನಗರ

NewYear : ನ್ಯೂ ಇಯರ್‌ ಸೆಲಿಬ್ರೇಷನ್‌ ಗೆ ಪುಂಡರಿಗೆ ಖಡಕ್‌ ಸೂಚನೆ : ಪೊಲೀಸ್‌ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

December 31, 2024
ಮುಖಪುಟಮೈಸೂರು ನಗರಸನ್ನಿಧಾನ

ಕಾರ್ತಿಕ ಮಾಸದ ಹಿನ್ನೆಲೆ ಬೆಟ್ಟದ ನಂದಿಗೆ ಮಹಾಭೀಷೇಕ

November 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?