PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನನ್ನ ಡಿಕೆಶಿ ನಡುವೆ ಗೊಂದಲ ಇಲ್ವೇ ಇಲ್ಲ., ಸುಗಮ ಆಡಳಿತವೊಂದೇ ಗುರಿ ; ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಟಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ನನ್ನ ಡಿಕೆಶಿ ನಡುವೆ ಗೊಂದಲ ಇಲ್ವೇ ಇಲ್ಲ., ಸುಗಮ ಆಡಳಿತವೊಂದೇ ಗುರಿ ; ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಟಿ
ಬೆಂಗಳೂರುಮುಖಪುಟರಾಜಕೀಯ

ನನ್ನ ಡಿಕೆಶಿ ನಡುವೆ ಗೊಂದಲ ಇಲ್ವೇ ಇಲ್ಲ., ಸುಗಮ ಆಡಳಿತವೊಂದೇ ಗುರಿ ; ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಟಿ

Prathinidhi News
Last updated: November 29, 2025 1:45 pm
Prathinidhi News
Published November 29, 2025
Share
SHARE

ಬೆಂಗಳೂರು, ನವೆಂಬರ್‌ 29, 2025 : ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನ ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ. 

Contents
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲಮಾಧ್ಯಮಗಳು ಗೊಂದಲ ಸೃಷ್ಟಿಸಿವೆ

ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.

ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

- ಜಾಹೀರಾತು -

ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.

2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ತೀರ್ಮಾನ: ಕಾರ್ಯತಂತ್ರಗಳ ಬಗ್ಗೆ ಚರ್ಚೆ
ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028 ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲ್ಲೂಕು , ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022 ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ, ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.

ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ

ಇತ್ತೀಚೆಗೆ ಅಧಿಕಾರ ಹಸ್ತಾತ್ಮ್ಯರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ನಗರದ ಬಸ್ ನಿಲ್ದಾಣದಲ್ಲಿ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ಪೋಲಿಯೊ ಜಾಗೃತಿ

December 19, 2025
ಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ.ಕೋಟೆ: ಎನ್. ಬೆಳತ್ತೂರು ನಿವಾಸಿಗಳಿಗೆ ನಿರಾಳ – ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

February 4, 2026
ಮುಖಪುಟಮೈಸೂರು ನಗರ

ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ: ಫ್ಲೆಕ್ಸ್ ಹಾವಳಿ ಹಾಗೂ ಬಾಗಲಕೋಟೆ ಕಲ್ಲು ತೂರಾಟದ ವಿರುದ್ಧ ಮೈಸೂರಿನಲ್ಲಿ ಆಕ್ರೋಶ

February 21, 2026
ಮಂಡ್ಯಮುಖಪುಟ

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು!

November 5, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?