PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಬೇರೆ ಅರ್ಥ ಬೇಡ, ನಮ್ಮಲ್ಲಿ ಭಿನ್ನಮತ ಇಲ್ಲ’: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಬೇರೆ ಅರ್ಥ ಬೇಡ, ನಮ್ಮಲ್ಲಿ ಭಿನ್ನಮತ ಇಲ್ಲ’: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಮುಖಪುಟಮೈಸೂರು ನಗರ

ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಬೇರೆ ಅರ್ಥ ಬೇಡ, ನಮ್ಮಲ್ಲಿ ಭಿನ್ನಮತ ಇಲ್ಲ’: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Prathinidhi News
Last updated: December 1, 2025 1:41 pm
Prathinidhi News
Published December 1, 2025
Share
SHARE

ಮೈಸೂರು, ಡಿಸೆಂಬರ್‌ 1, 2025 : ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ನಡೆಯುತ್ತಿರುವ ‘ಬ್ರೇಕ್ ಫಾಸ್ಟ್ ಮೀಟಿಂಗ್‌’ಗಳು ಮತ್ತು ಭಿನ್ನಮತದ ಚರ್ಚೆಗಳ ಕುರಿತು ಮೈಸೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಪಷ್ಟನೆ ನೀಡಿದ್ದಾರೆ. ಸಭೆಗಳನ್ನು ರಾಜಕೀಯ ಸಭೆಗಳೆಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದರು.

ಬ್ರೇಕ್ ಫಾಸ್ಟ್ ಮೀಟಿಂಗ್‌ಗಳಿಗೆ ಬೇರೆ ಅರ್ಥಗಳನ್ನು ಕಲ್ಪಿಸುವುದು ಬೇಡ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್‌ಗಳಲ್ಲಿ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡುತ್ತಾರೆ. ಅದನ್ನು ಪೊಲಿಟಿಕಲ್ ಬ್ರೇಕ್ ಫಾಸ್ಟ್ ಎಂದು ಹೇಳುವುದು ಬೇಡ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತದ ಚರ್ಚೆಗಳು ನಡೆಯುತ್ತಿವೆ ಎಂಬ ಊಹಾಪೋಹಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಭಿನ್ನಮತ ಇಲ್ಲ ಎಂದು ದೃಢಪಡಿಸಿದರು. ನಮ್ಮಲ್ಲಿ ಯಾವುದೇ ಭಿನ್ನಮತಗಳು ಇಲ್ಲ. ಸುಮ್ಮನೆ ಅದು ಹೊರಗಡೆ ಚರ್ಚೆಯಾಗುತ್ತಿದೆ. ಪಕ್ಷದ ಮತ್ತು ಸರ್ಕಾರದ ಹಿತದೃಷ್ಟಿಯಿಂದ ಇಂತಹ ಚರ್ಚೆಗಳು ನಡೆಯಬಾರದು. ಆದರೆ ಈ ಎಲ್ಲಾ ಚರ್ಚೆಗಳು ನಡೆದು ಬಿಟ್ಟಿವೆ. ಎಲ್ಲವೂ ಈಗ ಬಗೆ ಹರಿದಿದೆ.

ಹೈಕಮಾಂಡ್ ನಿರ್ಧಾರವೇ ಅಂತಿಮ

ಕೆಲವು ಸಮುದಾಯದ ಶಾಸಕರು ತಮ್ಮ ನಾಯಕರ ಪರವಾಗಿ ಧ್ವನಿ ಎತ್ತುತ್ತಿರುವ ಕುರಿತು ಪ್ರಸ್ತಾಪಿಸಿದ ಅವರು, ಅದು ಅವರ ವೈಯಕ್ತಿಕ ಸ್ವಾತಂತ್ರ್ಯ ಎಂದರು. ಕೆಲವು ಸಮುದಾಯಗಳ ಶಾಸಕರು ತಮ್ಮ ನಾಯಕರ ಪರ ಧ್ವನಿ ಎತ್ತಿದ್ದಾರೆ. ಅದು ಅವರ ಸ್ವತಂತ್ರ ಎಂದರು. ಅಂತಿಮವಾಗಿ ಎಲ್ಲವನ್ನೂ ನಿರ್ಧಾರ ಮಾಡುವುದು ನಮ್ಮ ಹೈಕಮಾಂಡ್. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಸಿಎಂ, ಡಿಸಿಎಂ ಅವರೇ ಹೇಳಿದ್ದಾರೆ. ಅಲ್ಲಿಗೆ ಎಲ್ಲಾ ಚರ್ಚೆಗಳು ಮುಗಿದಿವೆ ಎಂದು ಸಚಿವ ಗುಂಡೂರಾವ್ ತಿಳಿಸಿದರು. ಅಲ್ಲದೆ, ಸಿಎಂ ಮತ್ತು ಡಿಸಿಎಂ ಒಂದಾಗಿಯೇ ಸರ್ಕಾರ ನಡೆಸುತ್ತಿದ್ದಾರೆ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದೂ ಅವರು ಸ್ಪಷ್ಟಪಡಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಚಿಂಟು ನೆನಪಲ್ಲಿ ಸಾ.ರಾ. ಮಹೇಶ್ ಭಕ್ತಿಪೂರ್ವಕ ನಮನ: ಫಾರಂ ಹೌಸ್‌ನಲ್ಲಿ ವಿಶೇಷ ಹೋಮ-ಹವನ

January 1, 2026
ದೇಶ-ವಿದೇಶಮುಖಪುಟ

ಟೆಕ್ಸಾಸ್ ಸಮುದ್ರದಲ್ಲಿ ಮೆಕ್ಸಿಕನ್ ನೌಕಾಪಡೆ ವಿಮಾನ ಪತನ: ಐವರ ದುರ್ಮರಣ

December 23, 2025
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಹೆಚ್ಚಿದ ಹುಲಿ ಉಪಟಳ : ಬಿಇಎಂಎಲ್ ಕಾರ್ಖಾನೆ ಬಳಿ ಮತ್ತೆ ಹುಲಿ ಪ್ರತ್ಯಕ್ಷ!

December 5, 2025
ಮುಖಪುಟಮೈಸೂರು ನಗರ

ಕೌನ್ಸಿಲ್‌ ಪ್ರಕ್ರಿಯೆ ತಡೆಗೆ ಆಗ್ರಹ : ನಾಳೆಯಿಂದ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಪ್ರತಿಭಟನೆ !

December 2, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?