PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕಳ್ಳರ ಹಾವಳಿ ; ಪ್ರಾವಿಷನ್ ಸ್ಟೋರ್‌ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕಳ್ಳರ ಹಾವಳಿ ; ಪ್ರಾವಿಷನ್ ಸ್ಟೋರ್‌ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ !
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕಳ್ಳರ ಹಾವಳಿ ; ಪ್ರಾವಿಷನ್ ಸ್ಟೋರ್‌ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ !

Prathinidhi News
Last updated: January 13, 2026 3:50 pm
Prathinidhi News
Published January 13, 2026
Share
SHARE

ಹುಣಸೂರು, ಜನವರಿ 16, 2026 : ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ತಡರಾತ್ರಿ ಪ್ರಾವಿಷನ್ ಸ್ಟೋರ್ ಒಂದಕ್ಕೆ ನುಗ್ಗಿದ ಕಳ್ಳನೋರ್ವ ಮಾಲೀಕ ಎಚ್ಚರಗೊಂಡ ಹಿನ್ನೆಲೆಯಲ್ಲಿ ಬರಿಗೈಲಿ ಪರಾರಿಯಾದ ಘಟನೆ ನಡೆದಿದೆ.

ಗ್ರಾಮದ ಕೆ.ಆರ್. ನಗರ ಮುಖ್ಯ ರಸ್ತೆಯಲ್ಲಿರುವ ಈ ಅಂಗಡಿಗೆ ಮೊಬೈಲ್ ಬ್ಯಾಟರಿ ಬೆಳಕಿನ ಸಹಾಯದಿಂದ ನುಗ್ಗಲು ಯತ್ನಿಸಿದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಕಳ್ಳ ಒಳಬರುತ್ತಿದ್ದಂತೆಯೇ ಮಾಲೀಕರು ಎಚ್ಚರಗೊಂಡಿದ್ದರಿಂದ ಗಾಬರಿಗೊಂಡ ಖದೀಮ ಸ್ಥಳದಿಂದ ಓಡಿ ಹೋಗಿದ್ದಾನೆ. ಈ ಘಟನೆಯು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ. ಇತ್ತೀಚೆಗಷ್ಟೇ ಹುಣಸೂರಿನ ಚಿನ್ನದಂಗಡಿಯೊಂದರಲ್ಲಿ ಹಾಡುಹಗಲೇ ನುಗ್ಗಿದ್ದ ಮುಸುಕುಧಾರಿಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದರು. ಇದರ ಬೆನ್ನಲ್ಲೇ ಮೈಸೂರು ನಗರದಲ್ಲಿ ಸರಣಿ ಬೈಕ್ ಕಳ್ಳತನಗಳು, ಪಿರಿಯಾಪಟ್ಟಣದ ಬೈಲಕುಪ್ಪೆಯಲ್ಲಿ ಅಡಿಕೆ ತೋಟ ಹಾಗೂ ಮೊಬೈಲ್ ಅಂಗಡಿಗಳಿಗೆ ಕನ್ನ ಹಾಕಿದ ಪ್ರಕರಣಗಳು ವರದಿಯಾಗಿವೆ. ನಂಜನಗೂಡು ಭಾಗದಲ್ಲಿ ಹಸುಗಳ ಕಳ್ಳತನವೂ ನಡೆಯುತ್ತಿದ್ದು, ಜಿಲ್ಲೆಯಾದ್ಯಂತ ದರೋಡೆಕೋರರ ಕಾಟಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಸತತವಾಗಿ ನಡೆಯುತ್ತಿರುವ ಈ ಅಪರಾಧ ಕೃತ್ಯಗಳು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿವೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ದೇಶ-ವಿದೇಶಮುಖಪುಟ

ದುಬೈ : ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನದಲ್ಲಿ ತೇಜಸ್‌ ಯುದ್ಧ ವಿಮಾನ ಪತನ !

November 22, 2025

ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ; ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದೇಕೆ?

November 10, 2025
ಬೆಂಗಳೂರುಮುಖಪುಟರಾಜಕೀಯ

ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ʼಕಾಗಿನೆಲೆʼ ಸ್ವಾಮೀಜಿ ; ನಿರ್ಮಲಾನಂದ ಸ್ವಾಮೀಜಿಗೆ ಟಾಂಗ್‌ !

November 27, 2025
ಮುಖಪುಟಮೈಸೂರು ನಗರರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ, ಯಾರಿಂದಲೂ ಕೆಳಗಿಳಿಸಲು ಸಾಧ್ಯವಿಲ್ಲ: ಸಚಿವ ಜಮೀರ್ ಅಹ್ಮದ್ ಖಾನ್ ಖಡಕ್ ಹೇಳಿಕೆ

December 24, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?