ಮಡಿಕೇರಿ: ಮಡಿಕೇರಿ ಕೊಡವ ಸಮಾಜ ಹಾಗೂ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವತಿಯಿಂದ ಜನರಲ್ ತಿಮ್ಮಯ್ಯ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ತಿಮ್ಮಯ್ಯ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಕೊಡವ ಸಮಾಜದ ಪದಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವೀರ ಸೇನಾನಿಗೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿದೇಶಕರುಗಳಾದ ಪುತ್ತರಿರ ಕರುಣ್ ಕಾಳಯ್ಯ, ನಂದಿನೆರವಂಡ ರವಿಬಸಪ್ಪ, ಕಾಳಚಂಡ ಅಪ್ಪಣ್ಣ, ಮಂಡಿರ ಸದಾ ಮುದ್ದಪ್ಪ, ಕನ್ನಂಡ ಕವಿತಾ ಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಜನರಲ್ ತಿಮ್ಮಯ್ಯ ಶಾಲೆಯ ಪಾಂಶುಪಾಲರಾದ ಕಲ್ಮಾಡಂಡ ಸರಸ್ವತಿ, ಆಡಳಿತಾಧಿಕಾರಿ ಮುಕ್ಕಾಟಿರ ಪೊನಮ್ಮ, ಚೌರಿರ ಕಾವೇರಿ ಪೂವಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಚೊಟ್ಟೆಯಂಡ ಸಂಜು, ಅಜ್ಜಮಕ್ಕಡ ವಿನು, ಚೋಕಿರ ಅನಿತಾ, ತೆನ್ನಿರ ಮೈನಾ, ಕೊಕ್ಕಲೆರ ತಿಮ್ಮಯ್ಯ, ಓಡಿಯಂಡ ತಿಮ್ಮಯ್ಯ, ಶಾಂತೆಯಂಡ ನಿರನ್, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಸದಸ್ಯ ಬಿ.ವೈ.ರಾಜೇಶ್, ಮಾಜಿ ಸದಸ್ಯ ಅಪ್ಪನೆರವಂಡ ಚುಮ್ಮಿ ದೇವಯ್ಯ, ಸಾಮಾಜಿಕ ಕಾರ್ಯಕರ್ತೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಔಷಧ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ಜೀವನ್, ಮಾಜಿ ಸೈನಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಫೋಟೋ :: ತಿಮ್ಮಯ್ಯ
