ಹಾಸನ ಹಾಸನಾಂಬೆ ದರ್ಶನ ಪಡೆದ ಬಳಿಕ ಮಾತನಾಡಿದ ಮಾಜಿ ಪ್ರದಾನಿ ಹೆಚ್ಡಿ ದೇವೇಗೌಡ, ಹಾಸನಾಂಬೆ ತಾಯಿ ದರ್ಶನಕ್ಕೆ ಪ್ರತೀವರ್ಷ ಕುಟುಂಬ ಸಮೇತ ಬರುತ್ತೇನೆ. ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾರೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರು ಆರೋದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ. ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು. ಜಿಲ್ಲೆಯ ಅದಿಕಾರಿ ವರ್ಗ ಹಾಸನಾಂಬೆ ಉತ್ಸವವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಹಿಂದೆಂದೂ ಇಷ್ಟೊಂದು ವಿಜೃಂಭಣೆಯ ದೀಪಾಲಂಕಾರ ನಾನು ನೋಡಿರಲಿಲ್ಲ. ಎಲ್ಲೆಲ್ಲೂ ವಿದ್ಯುತ್ ದೀಪಾಲಂಕಾರ ಸೊಗಸಾಗಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಎಲ್ಲರ ಸಹಕಾರದಿಂದ ಉತ್ತಮವಾಗಿ ಆಯೋಜನೆ ಮಾಡಿದ್ದಾರೆ. ಅರೋಗ್ಯ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ. ಮುಂದಿನಬಾರಿ ಆ ತಾಯಿ ದರ್ಶನಕ್ಕೆ ನಡೆದುಕೊಂಡು ಬರುವ ಶಕ್ತಿ ಕೊಡಬಹುದು ಎಂದರು.