ಬೆಂಗಳೂರು, ಅ.13: ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗ್ಗೆ ವಿಪಕ್ಷ ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇದೆ. ಆದರೆ, ಯಾವುದೇ ಪ್ರತಿಕ್ರಿಯೆ ನೀಡದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಮೌನ ಮುರಿದಿದ್ದು, ಮಳೆ ಕಡಿಮೆ ಆಗಿರುವುದರಿಂದ ಸಮಸ್ಯೆ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆ ಇದೆ ಹಾಗೂ ಬೇಡಿಕೆ ಹೆಚ್ಚಿದೆ. ಕಳೆದ ವರ್ಷ 900-1000 ಮೆಗಾವ್ಯಾಟ್ ವಿದ್ಯುತ್ ಬಳಕೆ ಆಗುತ್ತಿತ್ತು. ಈ ಬಾರಿ 1500-1600 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಹೊರ ರಾಜ್ಯದಿಂದ ವಿದ್ಯುತ್ ಖರೀದಿಸುವ ಬಗ್ಗೆ ಸಭೆ ಕರೆದಿದ್ದೇನೆ. ವಿದ್ಯುತ್ ಉತ್ಪಾದಿಸುವವರು ಸರ್ಕಾರಕ್ಕೆ ನೀಡುವಂತೆ ಆದೇಶಿಸಿದ್ದೇನೆ. ವಿದ್ಯುತ್ ಖರೀದಿಸಿ ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದರು.