ಮಾಲೂರು
ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ವಿ.ಶಿವಕುಮಾರ್ ತಿಳಿಸಿದ್ದಾರೆ.
ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ತಾಲೂಕು ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಅಂಬೇಡ್ಕರ್ ಉದ್ಯಾನವನದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಗುವುದು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ.ರಮೇಶ್, ತಾಪಂ ಇಒ ವೀಣಾ, ಪುರಸಭಾ ಮುಖ್ಯಾಧಿಕಾರಿ ಪ್ರದೀಪ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಮುನೇಗೌಡ, ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಷಣ್ಮುಖಯ್ಯ ಸೇರಿದಂತೆ ದಲಿತ ಪರ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.