PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮುನ್ಸೂಚನೆ ನೀಡದೆ ಜೆಸಿಬಿ ಕಾರ್ಯಾಚರಣೆ : ಮೈಸೂರು ಮಹಾನಗರ ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮುನ್ಸೂಚನೆ ನೀಡದೆ ಜೆಸಿಬಿ ಕಾರ್ಯಾಚರಣೆ : ಮೈಸೂರು ಮಹಾನಗರ ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ
ಮುಖಪುಟಮೈಸೂರು ನಗರ

ಮುನ್ಸೂಚನೆ ನೀಡದೆ ಜೆಸಿಬಿ ಕಾರ್ಯಾಚರಣೆ : ಮೈಸೂರು ಮಹಾನಗರ ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ

Prathinidhi News
Last updated: July 16, 2026 2:58 pm
Prathinidhi News
Published July 16, 2026
Share
SHARE

ಮೈಸೂರು, ಜುಲೈ 16, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಆದರೆ ವ್ಯಾಪಾರಿಗಳಗೆ ಯಾವುದೇ ಮುನ್ಸೂಚನೆ ನೀಡದೆ ಫುಟ್ ಪಾತ್‌ ಒತ್ತುವರಿಗೆ ಮುಂದಾಗಿರುವುದು ವ್ಯಾಪಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. 

ನಗರದ ಎಂ.ಜಿ. ರಸ್ತೆಯ ಕೆಲ ಭಾಗಗಳಲ್ಲಿ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿದ ಪಾಲಿಕೆ ಸಿಬ್ಬಂದಿ, ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗಿದ್ದ ಹಣ್ಣಿನ ಅಂಗಡಿ, ಜ್ಯೂಸ್ ಅಂಗಡಿಗಳ ಮುಂದೆ ಇಟ್ಟಿದ್ದ ಚೇರ್ ಹಾಗೂ ಕಲ್ಲು ಚಪ್ಪಡಿಗಳನ್ನು ಜಪ್ತಿ ಮಾಡಿದರು. ಇದೇ ವೇಳೆ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಅಳವಡಿಸಲಾಗಿದ್ದ ವಾಣಿಜ್ಯ ಮಂಡಳಿಗಳು ಹಾಗೂ ಬೋರ್ಡ್‌ಗಳನ್ನು ಸಹ ತೆರವುಗೊಳಿಸಲಾಯಿತು.

ಇನ್ನು ಕಾರ್ಯಾಚರಣೆ ವೇಳೆ ಸ್ಥಳೀಯ ಅಂಗಡಿ ಮತ್ತು ಆಸ್ಪತ್ರೆ ಮಾಲೀಕರು ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಒತ್ತುವರಿ ತೆರವುಗೊಳಿಸುವ ಮುನ್ನ ಕನಿಷ್ಠ ಪಕ್ಷ ನೋಟಿಸ್ ನೀಡಬೇಕಿತ್ತು ಎಂದು ಆಸ್ಪತ್ರೆ ಮಾಲೀಕರೊಬ್ಬರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂಚಿತವಾಗಿ ಮಾಹಿತಿ ನೀಡಿದ್ದರೆ ತಾವೇ ಬೋರ್ಡ್‌ಗಳನ್ನು ತೆರವು ಮಾಡಿಕೊಳ್ಳುತ್ತಿದ್ದೆವು, ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಕಾರ್ಯಾಚರಣೆ ನಡೆಸಿರುವುದರಿಂದ ತಮಗೆ ಭಾರಿ ನಷ್ಟವಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡರು. ಅಲ್ಲದೆ, ನಗರದ ಬೇರೆ ಕಡೆಗಳಲ್ಲಿ ಒತ್ತುವರಿ ತೆರವು ಮಾಡದೆ ಕೇವಲ ತಮ್ನನ್ನು ಗುರಿಯಾಗಿಸಿಕೊಂಡು ಈ ರಸ್ತೆಯನ್ನೇ ಯಾಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಮಾಲೀಕರು ಅಧಿಕಾರಿಗಳನ್ನು ತರಾಟೆಗೆ ಪಡೆದ ಘಟನೆಯೂ ನಡೆಯಿತು.

- ಜಾಹೀರಾತು -

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಜಿ.ಟಿ.ದೇವೇಗೌಡರಿಂದ ತಾಲ್ಲೂಕು ಮಟ್ಟದ ಪ್ರತಿಭಾಕಾರಂಜಿ ಉದ್ಘಾಟನೆ

December 26, 2025
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ರಾಜಕಾರಣಕ್ಕೆ ಅಧಿಕೃತವಾಗಿ ಅಡಿಪಾಯ ಹಾಕಿದ ಮಾಜಿ ಸಂಸದ ಪ್ರತಾಪ್‌ ಸಿಂಹ : ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಎಂಟ್ರಿ

January 5, 2026
ಮುಖಪುಟರಾಜಕೀಯ

ಭೀಕರ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ..!

January 28, 2026
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ

November 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?