PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರು : ಖಾಸಗಿ ಶಾಲಾ ಬಸ್​ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಬೆಂಗಳೂರು : ಖಾಸಗಿ ಶಾಲಾ ಬಸ್​ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು !
ಬೆಂಗಳೂರುಮುಖಪುಟ

ಬೆಂಗಳೂರು : ಖಾಸಗಿ ಶಾಲಾ ಬಸ್​ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು !

Prathinidhi News
Last updated: February 11, 2026 6:09 pm
Prathinidhi News
Published February 11, 2026
Share
SHARE

ಬೆಂಗಳೂರು, ಫೆಬ್ರವರಿ 11, 2026 : ಶಾಲಾ ಬಸ್​ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ಜರುಗಿದೆ. ಖಾಸಗಿ ಶಾಲೆಯ ಬಸ್ ಬೈಕ್​​ಗೆ​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 

ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಯಾದಗಿರಿ ಮೂಲದ ನಾಗನಗೌಡ ಅವರು ಸಿಎಆರ್​ನಲ್ಲಿ ಕಾನ್ಸ್​ಟೇಬಲ್​​ ಆಗಿದ್ದಾರೆ. ತಮ್ಮ ಮಗಳು ವರ್ಷ ಮತ್ತು ಅಣ್ಣನ ಮಗಳಾದ ಭಾನು ಅನ್ನು ಬೈಕ್​ನಲ್ಲಿ ಕೂರಿಸಿಕೊಂಡು ಹಾಲು ತರಲು ಹೋಗುತ್ತಿದ್ದರು. ಇದೇ ವೇಳೆ ಸ್ಕೂಲ್ ಟೈಮ್​​ ಆಗಿದ್ದರಿಂದ ಬಸ್ ಮಕ್ಕಳ ಪಿಕಪ್​ಗೆ ತೆರಳುತ್ತಿತ್ತು. ಬಸ್​ ಬರುವುದನ್ನು ಕಂಡು ನಾಗನಗೌಡ ಅವರು ಬೈಕ್ ನಿಲ್ಲಿಸಿದ್ದರು.

ಹೆಣ್ಣೂರು ಸಂಚಾರಿ ಠಾಣೆ ವ್ಯಾಪ್ತಿಯ ಥಣಿಸಂದ್ರ ಬಳಿ ಶಾಲಾ ಬಸ್​ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್​ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಹರಿದಿದೆ. ಕೂಡಲೇ ಮಕ್ಕಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾನ್ಸ್​ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನು ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಜಮಾಯಿಸಿದ್ದು, ಮಕ್ಕಳನ್ನ‌ ಕಳೆದುಕೊಂಡ ಹಿನ್ನಲೆ  ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಹೆಣ್ಣೂರು ಸಂಚಾರ ಪೊಲೀಸರು ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟದಲ್ಲಿ ಅವೈಜ್ಞಾನಿಕ ಕಾಮಗಾರಿ: ಚಾಮುಂಡೇಶ್ವರಿಯ ಶಾಪ ತಟ್ಟಲಿದೆ ಎಂದು ಮುಖಂಡರ ಎಚ್ಚರಿಕೆ

February 12, 2026
ಮುಖಪುಟಮೈಸೂರು ನಗರರಾಜಕೀಯ

ದೀರ್ಘಾವಧಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಗಮನಾರ್ಹ ಕೊಡುಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಟೀಕಿಸಿದ ಯದುವೀರ್‌

January 7, 2026
ಮುಖಪುಟಮೈಸೂರು ನಗರ

ಮೈಸೂರು: ಕರ್ತವ್ಯದಲ್ಲೇ ಸೆಕ್ಯೂರಿಟಿ ಗಾರ್ಡ್ ಸಾವು ; ರಜೆ ನೀಡದ ಸೂಪರ್‌ವೈಸರ್ ವಿರುದ್ಧ ಆಕ್ರೋಶ, ಪ್ರತಿಭಟನೆ!

November 12, 2025
ಮುಖಪುಟಮೈಸೂರು ಗ್ರಾಮಾಂತರ

ಬಸವನಗಿರಿ ಆಶ್ರಮ ಶಾಲೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷ.!

November 12, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?