ತಿ ನರಸೀಪುರ, ಮಾರ್ಚ್ 20, 2026 : ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಸುಸಂದರ್ಭದಲ್ಲಿ ತಿ ನರಸೀಪುರ ತಾಲೂಕಿನ ಕರೋಹಟ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರಸ್ವಾಮಿ ರಥೋತ್ಸವವು ಅತ್ಯಂತ ವೈಭವದಿಂದ ಜರುಗಿತು.
ಸುಮಾರು ನಾಲ್ಕೈದು ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಈ ಐತಿಹಾಸಿಕ ಸಂಪ್ರದಾಯವನ್ನು ಈ ಬಾರಿಯೂ ಗ್ರಾಮಸ್ಥರು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಮುಂದುವರಿಸಿದರು.ಯುಗಾದಿ ಹಬ್ಬದ ವಿಶೇಷ ಪ್ರಯುಕ್ತ ಆಯೋಜಿಸಲಾಗಿದ್ದ ಈ ರಥೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು.
ನಾಡಿಗೆ ಮಳೆ-ಬೆಳೆ ಸಮೃದ್ಧಿಯಾಗಿ ಸಿಗಲಿ ಹಾಗೂ ಗ್ರಾಮಕ್ಕೆ ಸಕಲ ಶುಭವಾಗಲಿ ಎಂದು ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಭಕ್ತರು ದೇವರಲ್ಲಿ ಪ್ರಾರ್ಥಿಸಿದರು. ಬಸವೇಶ್ವರಸ್ವಾಮಿಯ ರಥವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸುವಾಗ ಭಕ್ತರ ಜೈಕಾರ ಹಾಗೂ ಹರ್ಷೋದ್ಗಾರಗಳಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
