ಮಂಡ್ಯ, ಡಿಸೆಂಬರ್ 16, 2025 : ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿದರು. ಈ ವೇಳೆ ಮದ್ದೂರಿನಲ್ಲಿ ಅವರಿಗೆ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಕೋರಲಾಯಿತು.

ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಕುಮಾರಸ್ವಾಮಿ ಅವರನ್ನು ಹಾರ ಹಾಕಿ, ಪೇಟ ತೊಡಿಸಿ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು. ಈ ವೇಳೆ ಕಾರ್ಯಕರ್ತರು ಜೈಕಾರ ಕೂಗಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.
ಕಾರ್ಯಕರ್ತರು ತೋರಿದ ಈ ಅಭಿಮಾನ ಮತ್ತು ಪ್ರೀತಿಯನ್ನು ಕಂಡು ಕುಮಾರಸ್ವಾಮಿ ಅವರು ಭಾವನಾತ್ಮಕವಾಗಿ ಕೃತಜ್ಞತೆ ಸಲ್ಲಿಸಿದರು.
