PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿಶ್ವವಿದ್ಯಾಲಯಗಳು ಸಾವಿನ ಹಾದಿಯಲ್ಲಿವೆ; ಐಸಿಯುನಿಂದ ಹೊರತಂದು ಉಳಿಸುವಂತೆ ಉಗ್ರ ನರಸಿಂಹೇಗೌಡ ಆಗ್ರಹ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ವಿಶ್ವವಿದ್ಯಾಲಯಗಳು ಸಾವಿನ ಹಾದಿಯಲ್ಲಿವೆ; ಐಸಿಯುನಿಂದ ಹೊರತಂದು ಉಳಿಸುವಂತೆ ಉಗ್ರ ನರಸಿಂಹೇಗೌಡ ಆಗ್ರಹ
ಮುಖಪುಟಮೈಸೂರು ನಗರ

ವಿಶ್ವವಿದ್ಯಾಲಯಗಳು ಸಾವಿನ ಹಾದಿಯಲ್ಲಿವೆ; ಐಸಿಯುನಿಂದ ಹೊರತಂದು ಉಳಿಸುವಂತೆ ಉಗ್ರ ನರಸಿಂಹೇಗೌಡ ಆಗ್ರಹ

Prathinidhi News
Last updated: January 3, 2026 2:34 pm
Prathinidhi News
Published January 3, 2026
Share
SHARE

ಮೈಸೂರು, ಜನವರಿ 3, 2026 : ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಇಂದು ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದು, ಅವುಗಳನ್ನು ಸಾವಿನ ಹಾದಿಯಿಂದ ತಪ್ಪಿಸಿ ಐಸಿಯುನಿಂದ ಹೊರತರುವ ತುರ್ತು ಕ್ರಮಗಳ ಅಗತ್ಯವಿದೆ ಎಂದು ಜನಾಂದೋಲನಗಳ ಮಹಾಮೈತ್ರಿ ಸಂಘಟನೆಯ ರಾಜ್ಯ ಸಂಚಾಲಕ ಉಗ್ರ ನರಸಿಂಹೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯರಾಗಿರುವ ಡಾ. ಸುಧಾಕರ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದರೂ, ದೇಶದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ವಿಶ್ವವಿದ್ಯಾಲಯಗಳನ್ನು ಬಲಪಡಿಸುವಲ್ಲಿ ವಿಫಲರಾಗಿದ್ದಾರೆ. ಬದಲಿಗೆ ಅವುಗಳನ್ನು ಮೌನವಾಗಿ ಕೊಲ್ಲಲು ಅವರು ಸಚಿವ ಸಂಪುಟದಲ್ಲಿ ಕುಳಿತಂತಿದೆ ಎಂದು ತೀಕ್ಷ್ಣವಾಗಿ ಟೀಕಿಸಿದರು. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳನ್ನು ಪದೇ ಪದೇ ಬದಲಾಯಿಸುವ ಮೂಲಕ ವಿಶ್ವವಿದ್ಯಾಲಯಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಉನ್ನತ ಶಿಕ್ಷಣ ಸಚಿವರು ಕೇವಲ ವಿದೇಶಿ ಪ್ರವಾಸಗಳಲ್ಲಿ ಹಾಗೂ ಖಾಸಗಿ ಮತ್ತು ವಿದೇಶಿ ವಿಶ್ವವಿದ್ಯಾಲಯಗಳನ್ನು ಉತ್ತೇಜಿಸುವಲ್ಲಿ ನಿರತರಾಗಿದ್ದಾರೆ ಎಂದು ಅವರು ದೂರಿದರು.

ವಿಶ್ವವಿಖ್ಯಾತ ಮೈಸೂರು ವಿಶ್ವವಿದ್ಯಾನಿಲಯದಂತಹ ಸಂಸ್ಥೆಗಳಲ್ಲಿ ಖಾಯಂ ಪ್ರಾಧ್ಯಾಪಕರನ್ನು ನೇಮಕ ಮಾಡದೆ, ಕೇವಲ ಅತಿಥಿ ಉಪನ್ಯಾಸಕರ ಮೇಲೆ ಇಡೀ ಶಿಕ್ಷಣ ವ್ಯವಸ್ಥೆಯನ್ನು ಹೇರಲಾಗಿದೆ. ಇದರಿಂದಾಗಿ ಬೋಧನೆಯ ಗುಣಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಇಂದಿನ ದಿನಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವುದು ಒಂದು ತುರ್ತು ಅಗತ್ಯವಾಗಿದ್ದು, ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಈ ಸಂಸ್ಥೆಗಳನ್ನು ಪುನಶ್ಚೇತನಗೊಳಿಸಬೇಕು ಎಂದು ಉಗ್ರ ನರಸಿಂಹೇಗೌಡ ಈ ಸಂದರ್ಭದಲ್ಲಿ ಆಗ್ರಹಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಗಳೂರುಮುಖಪುಟಮೈಸೂರು ನಗರ

ಮೈಸೂರು : ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿಯಾಗಿ SSLC ವಿದ್ಯಾರ್ಥಿ ಮೃ*ತ.. ಮೈಸೂರಿನ ತರಳಬಾಳು ಪ್ರೌಢಶಾಲೆಯ ಹಲವು ವಿದ್ಯಾರ್ಥಿಗಳಿಗೆ ಗಾಯ..

December 1, 2025
ಮುಖಪುಟಮೈಸೂರು ನಗರ

ಮೈಸೂರು : ಕೆನರಾ ಗೋಲ್ಡ್‌ ಸ್ಕಾಮ್‌ ಪ್ರಕರಣ ; ಕಡೆಗೂ ಬಿತ್ತು ಅಕ್ಕಸಾಲಿಗ ಅಶ್ವಿನ್‌ ಆಚಾರ್‌ ವಿರುದ್ಧ FIR

December 20, 2025
ಮುಖಪುಟಮೈಸೂರು ನಗರ

ಜನರ ತೆರಿಗೆ ಹಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

January 29, 2026
ಮಂಡ್ಯಮುಖಪುಟ

ಮೂರು ದಿನಗಳಿಂದ ಕಾಲುವೆಯಲ್ಲಿ ಸಿಲುಕಿರುವ ಕಾಡಾನೆ ; ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?