PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ವಿವಸ್ತ್ರಗೊಳಿಸಿ ವೀಡಿಯೋ ಚಿತ್ರೀಕರಣ – ನಾಲ್ವರ ಬಂಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ವಿವಸ್ತ್ರಗೊಳಿಸಿ ವೀಡಿಯೋ ಚಿತ್ರೀಕರಣ – ನಾಲ್ವರ ಬಂಧನ
ಕ್ರೈಂ ಸುದ್ದಿಗಳುಜಿಲ್ಲೆಮುಖಪುಟ

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ವಿವಸ್ತ್ರಗೊಳಿಸಿ ವೀಡಿಯೋ ಚಿತ್ರೀಕರಣ – ನಾಲ್ವರ ಬಂಧನ

Prathinidhi News
Last updated: July 8, 2025 3:05 pm
Prathinidhi News
Published July 8, 2025
Share
SHARE

ನೆಲಮಂಗಲ, ಜುಲೈ 08, 2025 : ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ವಿವಸ್ತ್ರಗೊಳಿಸಿ, ಮಾರಣಾಂತಿಕ ಹಲ್ಲೆ ನಡೆಸಿ, ಆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿರುವ ಘಟನೆ ನೆಲಮಂಗಲದಲ್ಲಿ ವರದಿಯಾಗಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹೇಮಂತ್, ಯಶ್ವಂತ್, ಶಿವಶಂಕರ್ ಮತ್ತು ಶಶಾಂಕ್ ಗೌಡ ಎಂದು ಗುರುತಿಸಲಾಗಿದೆ. ಕುಶಾಲ್ ಎಂಬ ಯುವಕ ಮತ್ತು ಒಬ್ಬ ಯುವತಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಕೆಲವು ತಿಂಗಳ ಹಿಂದೆ ಇವರ ಸಂಬಂಧ ಮುರಿದುಬಿದ್ದಿತ್ತು. ಈ ನಡುವೆ, ಯುವತಿಗೆ ಬೇರೊಬ್ಬ ಯುವಕನ ಪರಿಚಯವಾಗಿತ್ತು. ಇದನ್ನು ಸಹಿಸಿಕೊಳ್ಳಲಾಗದ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.

ಇದರಿಂದ ಕೆರಳಿದ ಯುವತಿ, ತನ್ನ ಹೊಸ ಗೆಳೆಯ ಮತ್ತು ಇತರ ಸ್ನೇಹಿತರೊಂದಿಗೆ ಸೇರಿಕೊಂಡು ಕುಶಾಲ್‌ನನ್ನು ಅಪಹರಿಸಿ ಹಲ್ಲೆ ನಡೆಸಲು ಸಂಚು ರೂಪಿಸಿದ್ದಾಳೆ. ಅದರಂತೆ, “ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳೋಣ” ಎಂದು ಕುಶಾಲ್‌ನನ್ನು ಕರೆಸಿಕೊಂಡು ಕಾರಿನಲ್ಲಿ ಅಪಹರಿಸಿದ್ದಾರೆ. ನಂತರ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸುವಾಗ, ಕುಶಾಲ್‌ನನ್ನು ವಿವಸ್ತ್ರಗೊಳಿಸಿ ಆತನ ಮರ್ಮಾಂಗಕ್ಕೆ ಒದ್ದಿದ್ದಾರೆ. ಅಲ್ಲದೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ ಇದೂ ಆಗಲಿದೆ ಎಂದು ಹೇಳಿ ಹಲ್ಲೆಯ ದೃಶ್ಯಗಳನ್ನು ವೀಡಿಯೋ ಮಾಡಿದ್ದಾರೆ. ತಾವು ಎ1 ಹೇಮಂತ್ ಮತ್ತು ಎ2 ನಾನು ಎಂದು ಹೇಳಿಕೊಳ್ಳುತ್ತಾ ವೀಡಿಯೋ ಚಿತ್ರೀಕರಿಸಿದ್ದಾರೆ. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದಾರೆ.

- ಜಾಹೀರಾತು -

ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಯುತ್ತಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸನ್ನಿಧಾನಸಿನಿಮಾ

ಹುಟ್ಟೂರಿನಲ್ಲಿ ಮಹದೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ ನಟ ಪ್ರಭುದೇವ…!

April 16, 2025
ಮುಖಪುಟಮೈಸೂರು ನಗರ

ವಿವಿಧ ಕಾರ್ಮಿಕ ಸಂಘಟನೆಗಳಿಂದ ಇಂದು ಭಾರತ್ ಬಂದ್ ಗೆ ಕರೆ : ಮೈಸೂರಿನಲ್ಲಿ ಪ್ರತಿಭಟನೆಗೆ ಸೀಮಿತವಾದ ಭಾರತ್ ಬಂದ್

July 9, 2025
ಬೆಂಗಳೂರುಮುಖಪುಟಸಿನಿಮಾ

ನಟ ದರ್ಶನ್‌ ಗೆ ಜಾಮೀನು ಮಂಜೂರು ಪ್ರಶ್ನಿಸಿ ಸುಪ್ರೀಂಗೆ ಪೊಲೀಸರ ಮೇಲ್ಮನವಿ !

December 17, 2024
ದೇಶ-ವಿದೇಶಮುಖಪುಟ

ಜಮ್ಮು- ಕಾಶ್ಮೀರದಲ್ಲಿ ಭದ್ರತಾ ಪಡೆ & ಉಗ್ರರ ನಡುವೆ ಗುಂಡಿನ ಚಕಮಕಿ: ಓರ್ವ ಉಗ್ರನ ಎನ್ಕೌಂಟರ್‌

November 6, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?