ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ಕಾನೂನಿನ ಪ್ರಕಾರ ಬಂದ್ ಮಾಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದೇನೆ. ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ. ಸುಖ ಸುಮ್ಮನೆ ಬಂಧಿಸುವುದಿಲ್ಲ. ಕಾನೂನು ವಿರುದ್ಧ ನಡೆದುಕೊಂಡರೆ ಬೇರೆ ವಿಧಿಯಿಲ್ಲ ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
