ಪ್ರತಿನಿಧಿ ವರದಿ ಚಾಮರಾಜನಗರ
ನಗರದ ಹೌಸಿಂಗ್ ಬೋರ್ಡ್ ಕಾಲೋನಿ ಬಳಿಯಿರುವ ಸೃಷ್ಟಿ ಚೇತನ ಹಿರಿಯ ನಾಗರಿಕರ ಹಗಲು ಯೋಗ ಕ್ಷೇಮ ಕೇಂದ್ರದಲ್ಲಿ ಮತದಾನ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿನಾಯಕ ಎಜುಕೇಷನ್ ಸೊಸೈಟಿ ಹಾಗೂ ಸೃಷ್ಟಿ ಚೇತನ ಹಿರಿಯ ನಾಗರಿಕರ ಹಗಲು ಯೋಗ ಕ್ಷೇಮ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು.
ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಲಕ್ಷ್ಮೀ ಮಾತನಾಡಿ, ಹಿರಿಯ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕು. ನೈತಿಕ ಮತದಾನವನ್ನು ಬೆಂಬಲಿಸಬೇಕು. ಮತದಾನದ ದಿನವನ್ನು ಪ್ರಜಾಪ್ರಭುತ್ವದ ಹಬ್ಬವಾಗಿ ಆಚರಿಸೋಣ. ಮತದಾನ ವರದಾನವಾಗಿದ್ದು, ಕಡ್ಡಾಯವಾಗಿ ಎಲ್ಲರೂ ಮತ ಹಾಕಿ ಎಂದು ತಿಳಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುರೇಶ್, ಸೃಷ್ಟಿ ಯೋಗ ಕ್ಷೇಮ ಕೇಂದ್ರದ ಯೋಜನಾ ಸಂಯೋಜಕ ನಿಂಗರಾಜು ಇತರರಿದ್ದರು.
5ಸಿಎಚ್ಎನ್.4: ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿ ಬಳಿಯಿರುವ ಸೃಷ್ಟಿ ಚೇತನ ಹಿರಿಯ ನಾಗರಿಕರ ಹಗಲು ಯೋಗ ಕ್ಷೇಮ ಕೇಂದ್ರದಲ್ಲಿ ಮತದಾನ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು.

