ಮಾಲೂರು: ಮತದಾನ ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಹರೀಂದ್ರ ಗೋಪಾಲ್ ತಿಳಿಸಿದರು.
ಚಿಕ್ಕತಿರುಪತಿಯಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಿಕ್ಕತಿರುಪತಿಯಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಜೀವಿನಿ ಮಹಿಳಾ ಸಂಘದ ವತಿಯಿಂದ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಕಚೇರಿಯಿಂದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ನಾಗರಿಕರಿಗೆ ಮತದಾರಿಗೆ ಮತದಾನದ ಅರಿವನ್ನು ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಹರೀಂದ್ರ ಗೋಪಾಲ್ ರವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಶೇಖರ್ ಹಾಗೂ (ಎನ್. ಆರ್. ಐ. ಎಂ) ಬಿ. ಎಂ.ಸ್ವೀಪ್ ಸಮಿತಿ ಉಸ್ತುವಾರಿ ಅಶೋಕ್, ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ನಾಗರಾಜ್, ಸಿಬ್ಬಂದಿ ವೆಂಕಟೇಶಪ್ಪ, ಮಾದೇಶ್, ನವೀನ್ ಹಾಜರಿದ್ದರು.