ಮೈಸೂರು, ಫೆಬ್ರವರಿ 17, 2026 : ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೆಸೆಯಲು ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಮಂಡಿ ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ವಿವಿಧ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಡೆಸಿದ ದಾಳಿಯ ವೇಳೆ ಅಪಾರ ಪ್ರಮಾಣದ ಮಾದಕ ಪದಾರ್ಥಗಳು ಪತ್ತೆಯಾಗಿವೆ.
ಈ ಕಾರ್ಯಾಚರಣೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಜಾಲದ ಹಿಂದಿರುವವರ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಸುಂದರ್ ರಾಜ್ ಅವರು, ನಗರವನ್ನು ಮಾದಕ ಮುಕ್ತಗೊಳಿಸಲು ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
