ಬೆಂಗಳೂರು , ಏಪ್ರಿಲ್ 7, 2026: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ.
ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕೆಲ ಭಾಗಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳದಲ್ಲಿ ಉತ್ತಮ ಮಳೆಯಾಗಲಿದೆ.
ಇನ್ನು ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲೂ ಮಳೆ ಸುರಿಯಲಿದೆ.ಬಳ್ಳಾರಿ, ಬೆಂಗಳೂರು, ಕೋಲಾರ, ಶಿವಮೊಗ್ಗ, ಹಾಸನ ಸೇರಿದಂತೆ ಹಲವೆಡೆ ಮಳೆಯ ಜೊತೆಗೆ ಬಿರುಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ಅಂದಾಜಿಸಲಾಗಿದೆ.
