ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ. ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ದುರ್ಘಟನೆಯಲ್ಲಿ 24 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
