ಮಾಲೂರು : ಕೋಮುವಾದಿ ಪಕ್ಷದ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಪಕ್ಷದ ಕಥೆಯನ್ನು ಮುಗಿಸಿಕೊಂಡಿದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ಶಾಸಕ ಕೆ ವೈ ನಂಜೇಗೌಡ ಹೇಳಿದರು.
ಪಟ್ಟಣದ ಅರಳೇರಿ ರಸ್ತೆಯಲ್ಲಿರುವ ಶ್ರೀರಂಗಂ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಸಮಾವೇಶದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ವಿ.ಗೌತಮ್ ಪರ ಮತಯಾಚನೆ ಮಾಡಿ ಮಾತನಾಡಿದರು.
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಆಡಳಿತ ನಡೆಸಿದ್ದು ಎರಡು ಬಾರಿ ಮಾತ್ರ ಬೇರೆ ಪಕ್ಷಗಳು ಅಧಿಕಾರ ನಡೆಸಿದೆ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಹೈಕಮಾಂಡ್ ಅಭ್ಯರ್ಥಿ ಘೋಷಣೆ ಮಾಡಿದ್ದು ನಮ್ಮೆಲ್ಲರ ಗುರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು.
ಕೇಂದ್ರದಲ್ಲಿ ಜನ ವಿರೋಧಿ ಬಿಜೆಪಿ ಸರ್ಕಾರವನ್ನು ತೊಲಗಿಸಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳು ಸಿದ್ದರಾಮಯ್ಯರವರು ಪ್ರತಿ ಮನಗೆ ತಲಪಿಸಿದ್ದಾರೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೆ ಬಡ ಜನರಿಗೆ ಇನ್ನೂ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರುತ್ತೇವೆ.
ಇನ್ನೂ ಜೆಡಿಎಸ್ ಪಕ್ಷ ಕೋಮುವಾದಿ ಪಕ್ಷದ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಪಕ್ಷದ ಕಥೆಯನ್ನು ಮುಗಿಸಿಕೊಂಡಿದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಶಾಸಕ ಕೆ ವೈ ನಂಜೇಗೌಡ ಹೇಳಿದರು.
ಕಾಂಗ್ರೆಸ್ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ವಿ.ಗೌತಮ್ ಅವರೊಂದಿಗೆ ಶಾಸಕ ಕೆ.ವೈ.ನಂಜೇಗೌಡ ರು ಪಟ್ಟಣದ ಅಂಬೇಡ್ಕರ್ ಉದ್ಯಾನವನದಲ್ಲಿರುವ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು, ನಂತರ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆರ್ಶಿವಾದ ಪಡೆದರು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿ ಅಪ್ತ ಕಾರ್ಯದರ್ಶಿ ನಜೀರ್ ಅಹಮದ್, ಎಂ.ಎಲ್.ಸಿ.ಅನಿಲ್ ಕುಮಾರ್, ಶಾಸಕ ಕೊತ್ತೂರು ಮಂಜುನಾಥ್, ಮಾಜಿ ಶಾಸಕ ಎ.ನಾಗರಾಜ್,ಡಿಸಿಸಿ ಸಿ.ಲಕ್ಷ್ಮೀ ನಾರಾಯಣ್, ಜಿ.ಪಂ.ಮಾಜಿ ಅಧ್ಯಕ್ಷೆ ರತ್ನಮ್ಮನಂಜೇಗೌಡ, ಎಂ.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷರಾದ ಅಪ್ಪಾಜಿಗೌಡ, ವಿ.ಮುನಿರಾಜು, ಬಾಳಿಗಾನಹಳ್ಳಿ ಶ್ರೀನಿವಾಸ್, ಪ್ರದೀಪ್ ರೆಡ್ಡಿ, ಮಧುಸೂದನ್, ಕೆ.ಮುನಿರಾಜು, ಹನುಮಂತಪ್ಪ, ವೀರಭದ್ರಪ್ಪ, ನವೀನ್, ಚನ್ನರಾಯಪ್ಪ, ಕ್ಷೇತ್ರನಹಳ್ಳಿ ವೆಂಕಟೇಶ್ ಗೌಡ, ವೆಂಕಟೇಶ್, ಮುರಳೀಧರ್, ನಹೀಮ್, ತನ್ವೀರ್, ಶಬ್ಬೀರ್, ಸುನೀಲ್ ನಂಜೇಗೌಡ, ಜಯದೇವ್, ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.