PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸುತ್ತೂರು ಶ್ರೀಗಳ ಭೇಟಿಯಾದ ಯದುವೀರ್‌
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ನಗರ > ಸುತ್ತೂರು ಶ್ರೀಗಳ ಭೇಟಿಯಾದ ಯದುವೀರ್‌
ಮೈಸೂರು ನಗರ

ಸುತ್ತೂರು ಶ್ರೀಗಳ ಭೇಟಿಯಾದ ಯದುವೀರ್‌

ಪ್ರತಿನಿಧಿ
Last updated: March 19, 2024 8:37 pm
ಪ್ರತಿನಿಧಿ
Published March 19, 2024
Share
SHARE

– ಶ್ರೀಗಳ ಆಶಿರ್ವಾದ ಪಡೆದ ಬಿಜೆಪಿ ಅಭ್ಯರ್ಥಿ
– ಯಾವ ವಿಚಾರ ಚರ್ಚಿಸಿಲ್ಲ ಎಂದ ಒಡೆಯರ್‌

ಪ್ರತಿನಿಧಿ ವರದಿ ಮೈಸೂರು
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು  ಮಂಗಳವಾರ ನಗರದ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ತೆರಳಿದ ಯದುವೀರ್ ಅವರಿಗೆ ಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಶ್ರೀಗಳ ಆಶೀರ್ವಾದ ಪಡೆದು,  ಕೆಲಕಾಲ ಅವರೊಂದಿಗೆ ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಯದುವೀರ್ ಒಡೆಯರ್‌, ಸುತ್ತೂರು ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ. ಭೇಟಿ ವೇಳೆಯಲ್ಲಿ ಬೇರೆ ಯಾವ ವಿಚಾರಗಳ ಬಗ್ಗೆಯೂ ಚರ್ಚಿಸಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬರುವ ಕುರಿತು ನನಗೆ ಇನ್ನೂ ಮಾಹಿತಿ ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್, ಮಾಜಿ ಸಚಿವ ಎನ್. ಮಹೇಶ್, ಮಾಜಿ ಶಾಸಕ ನಿರಂಜನಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಜಿ ಉಪ ಮೇಯರ್ ಶೈಲೇಂದ್ರ, ಮುಖಂಡರಾದ ಶಿವಕುಮಾರ್, ಫಣೀಶ್, ಕೃಷ್ಣಪ್ಪಗೌಡ, ಕೇಬಲ್ ಮಹೇಶ್ ಇತರರಿದ್ದರು.
================
ಬಾಕ್ಸ್‌
ರಾಜ-ರಾಣಿ ಪಟ್ಟಕ್ಕೆ ಮಹತ್ವವಿಲ್ಲ:

- ಜಾಹೀರಾತು -

“ಯಾರು ರಾಜ” ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲು ಯದುವೀರ್‌ ಒಡೆಯರ್‌ ನಿರಾಕರಿಸಿದರು. ಸುತ್ತೂರು ಮಠದಲ್ಲಿ ಈ ವಿಷಯದ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯಿಸಲಿ. ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ ರಾಣಿ ಎಂಬ ಯಾವ ಪಟ್ಟಕ್ಕೂ ವಿಶೇಷ ಮಹತ್ವ ಇಲ್ಲ. ಎಲ್ಲರೂ ಪ್ರಜೆಗಳೇ, ಇಷ್ಟನ್ನು ಮಾತ್ರ ನಾನು ಹೇಳಬಲ್ಲೆ ಎಂದರು.
===============

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಬೈಕ್‌, ಕಾರು ಭೀಕರ ಅಪಘಾತ, ತಾಯಿ ಮಗ ದುರಂತ ಸಾವು

April 15, 2025
ಮುಖಪುಟಮೈಸೂರು ನಗರ

ಅಂಬಾವಿಲಾಸ ಅರಮನೆಯ ವರಾಹ ಗೇಟ್ ಬಳಿ ಮೇಲ್ಚಾವಣಿ ಕುಸಿತ..! ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ..!

December 11, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಫೋಕ್ಸೋ ಕೇಸ್‌ ರಾಜಿ ವಿಫಲ ಹಿನ್ನಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಹಲ್ಲೆಗೊಳಗಾದ ನಾಲ್ವರು ಆಸ್ಪತ್ರೆಯಿಂದ ನಾಪತ್ತೆ

July 12, 2025
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಹೆಚ್ಚಿದ ಹುಲಿ ಉಪಟಳ : ಬಿಇಎಂಎಲ್ ಕಾರ್ಖಾನೆ ಬಳಿ ಮತ್ತೆ ಹುಲಿ ಪ್ರತ್ಯಕ್ಷ!

December 5, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?