PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಕೀಲರ ಸಂಘಕ್ಕೆ ಯದುವೀರ್‌ ಒಡೆಯರ್‌ ಭೇಟಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ನಗರ > ವಕೀಲರ ಸಂಘಕ್ಕೆ ಯದುವೀರ್‌ ಒಡೆಯರ್‌ ಭೇಟಿ
ಮೈಸೂರು ನಗರ

ವಕೀಲರ ಸಂಘಕ್ಕೆ ಯದುವೀರ್‌ ಒಡೆಯರ್‌ ಭೇಟಿ

ಪ್ರತಿನಿಧಿ
Last updated: March 28, 2024 9:33 pm
ಪ್ರತಿನಿಧಿ
Published March 28, 2024
Share
SHARE

– ಲೋಕಸಭಾ ಚುನಾವಣೆಗೆ ಬಿರುಸಿನ ಪ್ರಚಾರ
– ಬಿಜೆಪಿ ಅಭ್ಯರ್ಥಿಗೆ ವಕೀಲರಿಂದ ಅದ್ದೂರಿ ಸ್ವಾಗತ

ಪ್ರತಿನಿಧಿ ವರದಿ ಮೈಸೂರು
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಅವರು ಗುರುವಾರ ಮೈಸೂರಿನ ವಕೀಲರ ಸಂಘಕ್ಕೆ ಭೇಟಿ ನೀಡಿ ಮತಯಾಚನೆ ಮಾಡಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಮೈಸೂರು ವಕೀಲರ ಸಂಘಕ್ಕೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ವಕೀಲರ ಸಂಘದಿಂದ ಅದ್ದೂರಿ ಸ್ವಾಗತ ನೀಡಲಾಯಿತು. ನ್ಯಾಯಾಲಯದ ಆವರಣಕ್ಕೆ ಯದುವೀರ್‌ ಅವರು ಆಗಮಿಸುತ್ತಿದ್ದಂತೆ ನಾದಸ್ವರದ ಹಿಮ್ಮೇಳದೊಂದಿಗೆ ಮೈಸೂರು ಮಹಾರಾಜ ಯದುವೀರ್‌ಗೆ ಜಯವಾಗಲಿ ಎಂಬ ಘೋಷಣೆ ಕೂಗುವ ಮೂಲಕ ಮೈಸೂರಿನ ವಕೀಲರ ಸಂಘಕ್ಕೆ ಬರಮಾಡಿಕೊಳ್ಳಲಾಯಿತು.

ಬಳಿಕ ವಕೀಲರ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಯದುವೀರ್‌ ಒಡೆಯರ್‌, ನಮ್ಮ ಕುಟುಂಬಕ್ಕೂ ವಕೀಲರಿಗೂ ಅವಿನಾಭಾವ ಸಂಬಂಧವಿದೆ. ಅರಮನೆ ಪರಂಪರೆ ಉಳಿಸಿಕೊಳ್ಳಲು ವಕೀಲರ ಶ್ರಮಹೆಚ್ಚಿದ್ದು, ಅವರಿಗೆ ಸದಾ ಖುಣಿಯಾಗಿದ್ದೇನೆ. ಮೈಸೂರಿನ ಪರಂಪರೆಯನ್ನು ನ್ಯಾಯಾಂಗ ವ್ಯವಸ್ಥೆಯನ್ನು ಉಳಿಸುತ್ತಿರುವ ನಿಮಗೂ ಸಾಕಷ್ಟು ಸಮಸ್ಯೆಗಳಿವೆ. ಅದನ್ನು ಬಗೆಹರಿಸಲು ನಾನು ನಿಮ್ಮೊಟ್ಟಿಗೆ ಸದಾ ಇರುತ್ತೇನೆ ಎಂದು ಭರವಸೆ ನೀಡಿದರು.

- ಜಾಹೀರಾತು -

ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ತಮ್ಮ ಸಂಸದರ ಅನುದಾನದಿಂದ ಹಣ ನೀಡಿದ್ದರಿಂದ ಸಂಘದ ಕಟ್ಟಡ ನಿರ್ಮಾಣವಾಗಿದೆ. ಅವರು ಜನರಿಗೆ ಮಾತುಕೊಟ್ಟರೇ ಅದನ್ನು ಉಳಿಸಿಕೊಳ್ಳಲಿದ್ದು, ಎಂದಿಗೂ ತಪ್ಪುವುದಿಲ್ಲ. ಅವರಂತೆ ಯದುವೀರ್ ಅವರು ಕೂಡ ಸಾಮಾನ್ಯರಂತೆ ಎಲ್ಲರೊಟ್ಟಿಗೆ ಬೆರೆಯುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಮೈಸೂರು ವಕೀಲರ ಸಂಘದಿಂದ ಯದುವೀರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮ ಮುಗಿದ ಬಳಿಕ ಹಲವು ವಕೀಲರು ಯದುವೀರ್ ಒಡೆಯರ್‌ ಅವರೊಂದಿಗೆ ಸೆಲ್ಫೀ ತೆಗೆಸಿಕೊಳ್ಳಲು ಮುಂದಾದರು. ಎಲ್ಲರಿಗೂ ಸಮಾಧಾನದಿಂದಲೇ ಸ್ಪಂದಿಸಿದ ಯದುವೀರ್‌ ಅವರು ಸೆಲ್ಫೀ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ವಕೀಲರ ರಾಜ್ಯ ಸಂಘದ ಸದಸ್ಯ ಚಂದ್ರಮೌಳಿ ಇನ್ನಿತರರಿದ್ದರು.
================

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಸಿಎಂ ಸಿದ್ದರಾಮಯ್ಯರಿಂದ ಪ್ರಹ್ಲಾದ್ ಜೋಷಿ ಟೀಕೆಗೆ ತಿರುಗೇಟು: ‘ನಾವು ಮಾಡುತ್ತಿರುವುದು ಜಾತಿ ಗಣತಿ ಅಲ್ಲ, ಸಮೀಕ್ಷೆ’

October 3, 2025
ಮುಖಪುಟಮೈಸೂರು ನಗರಸನ್ನಿಧಾನ

ಹೊಸ ವರ್ಷಕ್ಕೆ 2 ಲಕ್ಷ ಲಡ್ಡು ವಿತರಣೆ..! ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಸಕಲ ಸಿದ್ದತೆ

December 28, 2024
ಮುಖಪುಟಮೈಸೂರು ನಗರ

ಹಿಂದೂ ಮುಸ್ಲಿಂ ಒಟ್ಟಾಗಿ ಗಣೇಶ ಹಬ್ಬ ಆಚರಣೆ : ಸೌಹಾರ್ದತೆ ಸಂದೇಶ ಸಾರಿದ ಯುವಕರು

August 28, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು ವಾರ್ತೆ: ನೋಂದಣಿ ಇಲ್ಲದ ಸಂಸ್ಥೆಗೆ ಪಥಸಂಚಲನಕ್ಕೆ ಅನುಮತಿ, ನೋಂದಣಿಯಾದ ಸಂಸ್ಥೆಗೆ ಕಾರ್ಯಕ್ರಮಕ್ಕೆ ತಡೆ!

October 28, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?